ಚುನಾವಣೆಯಲ್ಲಿ ಸತತ ಸೋಲು – ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

ಚುನಾವಣೆಯಲ್ಲಿ ಸತತ ಸೋಲು – ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿಯವರು ಪಕ್ಷದ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ಸಲ್ಲಿಸಿದ್ದು, ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಆಗಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸೋಲಿನ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ – ಖಾದರ್ ರನ್ನ ಸ್ಪೀಕರ್ ಮಾಡಿದ್ದಕ್ಕೆ ಇಬ್ರಾಹಿಂ ಕಿಡಿ!

ಚುನಾವಣೆಯಲ್ಲಿ ಸೋಲೇ ಅಂತಿಮವಲ್ಲ. ಸೋಲಿನಿಂದ ನಾನು ಕಂಗೆಟ್ಟಿಲ್ಲ. ಸೋತಿದ್ದರೂ ಸಹ ಪಕ್ಷದಿಂದ ದೂರ ಉಳಿಯದೇ ಪಕ್ಷವನ್ನು ಬೆಳೆಸಲು ದುಡಿಯುತ್ತೇನೆ. ಇನ್ನು ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ. ಪಕ್ಷ ಮರು ನಿರ್ಮಾಣ ಆಗಬೇಕು. ಅದಕ್ಕಾಗಿಯೇ ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಣಕ್ಕಿಳಿದಿದ್ದ ನಿಖಿಲ್​, ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್​ ವಿರುದ್ಧ ಸೋಲುಂಡಿದ್ದರು. ಇದರ ನೋವಿನಿಂದ ಹೊರಬರಲು ನಿಖಿಲ್​ಗೆ ಹಲವು ದಿನಗಳು ಬೇಕಾಯಿತು. ಇದೀಗ ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ರಾಮನಗರ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್​ನ ಇಕ್ಬಾಲ್​ ಹುಸೇನ್​ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದಾರೆ.

suddiyaana