`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ

`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ

ತೆಲುಗಿನ ʻದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಭಾರೀ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ನೀರಿನ ಟ್ಯಾಂಕರ್‌ ಸ್ಫೋಟಗೊಂಡಿದೆ. ಇದ್ರ ಪರಿಣಾಮ ಸೆಟ್‌ ನಲ್ಲಿ ಪ್ರವಾಹ ರೀತಿಯಲ್ಲಿ ನೀರು ನುಗ್ಗಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ 4 ದಿನ ಭಾರಿ ಮಳೆ ಆರ್ಭಟ – ಎಲ್ಲೆಲ್ಲಿ ರೆಡ್‌ ಅಲರ್ಟ್‌ ಘೋಷಣೆ?

ಶಂಶಾಬಾದ್​ನಲ್ಲಿ ‘ದಿ ಇಂಡಿಯನ್ ಹೌಸ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ವೇಳೆ ಶೂಟ್​ಗಾಗಿ ದೊಡ್ಡ ಟ್ಯಾಂಕರ್ ನಿರ್ಮಾಣ ಮಾಡಲಾಗಿತ್ತು. ಈ ಟ್ಯಾಂಕರ್ ಏಕಾಏಕಿ ಒಡೆದಿದೆ. ನೀರನ ಒತ್ತಡದಿಂದ ಟ್ಯಾಂಕರ್ ಒಡೆದಿರಬಹುದು ಎಂದು ಊಹಿಸಲಾಗಿದೆ. ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡ ಹೊರತಾಗಿಯೂ ಈ ಅವಘಡ ಉಂಟಾಗಿದೆ. ಈ ಚಿತ್ರದ ನಿರ್ಮಾಣದಲ್ಲಿ ರಾಮ್ ಚರಣ್ ಅವರು ಕೂಡ ಭಾಗಿ ಆಗಿದ್ದಾರೆ ಎನ್ನಲಾಗಿದೆ. ಈ ಘಟನೆಯ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಇನ್ನಷ್ಟೇ ಬರಬೇಕಿದೆ.

ದಿ ಇಂಡಿಯನ್ ಹೌಸ್ ಚಿತ್ರದ ಕಥೆ ಸ್ವಾತಂತ್ರ್ಯಪೂರ್ವ ವಿಚಾರವನ್ನು ಹೊಂದಿದೆ. ಲಂಡನ್​ನಲ್ಲಿ ಇದ್ದ ಇಂಡಿಯನ್ ಹೌಸ್​ನಲ್ಲಿ ನಡೆಯೋ ಲವ್​ ಸ್ಟೋರಿಯ ಬಗ್ಗೆಯೂ ಚಿತ್ರದಲ್ಲಿ ಹೇಳಲಾಗಿದೆ. ಈ ಸಿನಿಮಾಗೆ ರಾಮ್ ವಂಶಿ ಕೃಷ್ಣ ನಿರ್ದೇಶನ ಮಾಡಿದ್ದಾರೆ.  ಈ ಚಿತ್ರವನ್ನು ಅಭಿಷೇಕ್ ಅಗರ್​ವಾಲ್ ಹಾಗೂ ತೇಜ್ ನಾರಾಯಣ್ ಅಗರ್​ವಾಲ್ ನಿರ್ಮಾಣ ಮಾಡಿದ್ದಾರೆ. ನಿರ್ಮಾಣದಲ್ಲಿ ರಾಮ್ ಚರಣ್ ಕೂಡ ಕೈ ಜೋಡಿಸಿದ್ದಾರೆ ಎನ್ನಲಾಗಿದೆ.

ಸಾಮಾನ್ಯವಾಗಿ ಸಿನಿಮಾ ಮಾಡುವಾಗ ಉಂಟಾಗುವ ಅವಘಡಗಳಿಂದ ಕೆಲವೊಮ್ಮೆ ಪ್ರಾಣ ಹಾನಿ ಆದ ಉದಾಹರಣೆಯೂ ಇದೆ. ಈ ಬಗ್ಗೆ ಹೆಚ್ಚಿನ ಎಚ್ಚರಿಕೆ ಬೇಕು ಎಂಬ ಸೂಚನೆ ಇದ್ದರೂ ಕೆಲವು ನಿರ್ಲಕ್ಷ್ಯದಿಂದ ಈ ರೀತಿಯ ತೊಂದರೆ ಉಂಟಾಗುತ್ತದೆ.

Shwetha M