ಸತತ ಒಂಬತ್ತನೇ ಬಜೆಟ್ ಮಂಡಿಸದ ನಿರ್ಮಲಾ ಸೀತಾರಾಮನ್ – ದೇಶದ ಮೊದಲ ಮಹಿಳಾ ಹಣಕಾಸು ಸಚಿವೆ ಎಂಬ ದಾಖಲೆ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಈ ಮೂಲಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಸತತ ಒಂಬತ್ತನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದರು.
ಇದನ್ನೂ ಓದಿ:ನಿರ್ಮಲಾ ಸೀತಾರಾಮನ್‌ರಿಂದ ಇಂದು ಕೇಂದ್ರ ಬಜೆಟ್ ಮಂಡನೆ – ಫೆಬ್ರವರಿ 1ಕ್ಕೆ ಯಾಕೆ ಗೊತ್ತಾ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ದೇಶದ ಮೊದಲ ಮಹಿಳಾ ಹಣಕಾಸು ಸಚಿವೆ ಎಂಬ ದಾಖಲೆ ಬರೆದಿದ್ದಾರೆ. ಜೊತೆಗೆ ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್, ಈ ಬಜೆಟ್ ಅನ್ನು ಮಾಘ ಪೂರ್ಣಿಮೆ ಮತ್ತು ಗುರು ರವಿದಾಸ್ ಅವರ ಜನ್ಮ ದಿನದ ಸಂದರ್ಭದಲ್ಲಿ ಮಂಡಿಸುತ್ತಿದ್ದೇನೆ. ಕಳೆದ 12 ವರ್ಷಗಳಲ್ಲಿ, ಅನಿಶ್ಚಿತತೆಗಳ ಹೊರತಾಗಿಯೂ, ನಾವು ಸ್ಥಿರವಾದ ಆರ್ಥಿಕತೆಯನ್ನು ಕಾಯ್ದುಕೊಂಡಿದ್ದೇವೆ. ನಾವು ದೂರಗಾಮಿ ರಚನಾತ್ಮಕ ಸುಧಾರಣೆಗಳನ್ನು ಕೈಗೊಂಡಿದ್ದೇವೆ. ನಾವು ಸ್ವಾವಲಂಬನೆಯನ್ನು ಪ್ರಮುಖ ಉದ್ದೇಶವಾಗಿ ಕಾಯ್ದುಕೊಂಡಿದ್ದೇವೆ. ನಾವು ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿದ್ದೇವೆ ಎಂದು ಹೇಳಿದರು.

ನೋಡಿರಿ

