ಸನಾತನ ಧರ್ಮ ವಿವಾದ – ‘ಆಡುವ ಮಾತಿನ ಮೇಲೆ ನಿಗಾ ಇರಲಿ’ ಎಂದು ಎಚ್ಚರಿಸಿದ ನಿರ್ಮಲಾನಂದನಾಥ ಸ್ವಾಮೀಜಿ

ಸನಾತನ ಧರ್ಮ ವಿವಾದ – ‘ಆಡುವ ಮಾತಿನ ಮೇಲೆ ನಿಗಾ ಇರಲಿ’ ಎಂದು ಎಚ್ಚರಿಸಿದ ನಿರ್ಮಲಾನಂದನಾಥ ಸ್ವಾಮೀಜಿ

ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಪರೋಕ್ಷವಾಗಿ ತರಾಟೆ ತೆಗೆದುಕೊಂಡಿದ್ದಾರೆ. ಧರ್ಮದ ಬಗ್ಗೆ ತಿಳಿದುಕೊಳ್ಳದವನು ತಮ್ಮ ಧರ್ಮದ ಬಗ್ಗೆಯೂ, ಇತರೆ ಧರ್ಮಗಳ ಬಗ್ಗೆಯೂ ಮಾತನಾಡುತ್ತಾನೆ ಎಂದು ಶ್ರೀಗಳು ಹೇಳಿದ್ದಾರೆ. ಆಡುವ ಮಾತಿನ ಮೇಲೆ ನಿಗಾ ಇರಲಿ ಎಂದು ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ನಾವೆಲ್ಲ ಹಿಂದೂಗಳು.. ಹಿಂದೂ ಧರ್ಮದ ವಿರುದ್ಧ ಮಾತಾಡಿಲ್ಲ..- ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್‌

ಮೈಸೂರಿನಲ್ಲಿ ಮಾತನಾಡಿದ ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿಯವರು, ನಾಡಾಳುವ ನಾಸ್ತಿಕನಾದರೂ ಪ್ರಜೆಗಳ ಆಸ್ತಿಕತೆ ಗೌರವಿಸಬೇಕು. ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಬೇರೊಂದು ಧರ್ಮಕ್ಕೆ ಸೆಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಹಿಂದೂ ಧರ್ಮದ ಪರ ಸ್ವಾಮೀಜಿಗಳ ಹೋರಾಟದ ಕುರಿತು ನಿರ್ಮಲಾನಂದನಾಥ ಸ್ವಾಮೀಜಿ ಸುಳಿವು ನೀಡಿದ್ದಾರೆ. ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ! ಸನಾತನ ಪದಕ್ಕೆ ಶಾಶ್ವತ ಎನ್ನುವ ಅರ್ಥವಿದೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಜಾಗೃತವಾಗಿ ಮಾತನಾಡಬೇಕು. ಬಳಸುವ ಪದಗಳ ಬಗ್ಗೆ ನಿಗಾ ಇರಬೇಕು ಎಂದು ಹೇಳಿದರು. ‘ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ ಸನಾತನ’. ಧರ್ಮ ಅಂದರೆ ಸಿದ್ಧ ಸಾಧನೆಯ ಮಾರ್ಗ. ಸನಾತನ ಪದಕ್ಕೆ ಪುರಾತನ ಅರ್ಥವಿದೆ, ಎಲ್ಲರಿಗೂ ಇತಿಹಾಸ ಗೊತ್ತಿದೆ ಎಂದು ಶ್ರೀಗಳು ಹೇಳಿದ್ದಾರೆ.

suddiyaana