ಬಿಹಾರದ ನೂತನ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಆಯ್ಕೆ!

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಿಎಂ ಆಯ್ಕೆ ಮಾಡಲಾಗಿದೆ. ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.
ಇದನ್ನೂ ಓದಿ: ರಿಲೀಸ್ ಆಗುವುದಕ್ಕೂ ಮುನ್ನವೇ ದಳಪತಿ ಸಿನಿಮಾ ಟಿವಿಯಲ್ಲಿ ಪ್ರಸಾರ! – ವಿಜಯ್ ಚಿತ್ರ ಲೀಕ್ ಮಾಡಿದವರು ಅರೆಸ್ಟ್!
ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ಸಚಿವ ಸಂಪುಟವನ್ನು ವಿಸರ್ಜಿಸಿದ ನಂತರ ಅವರು ಇಂದು ಮಧ್ಯಾಹ್ನ ಲೋಕ ಭವನದಲ್ಲಿ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಈ ಬೆನ್ನಲ್ಲೇ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಹೊಸ ಸಿಎಂ ಆಗಿ ಚೌಧರಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಸಾಮ್ರಾಟ್ ಚೌಧರಿ ಅವರು ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ಬಿಜೆಪಿ ನಾಯಕರಾಗಿದ್ದಾರೆ. 57 ವರ್ಷದ ಚೌಧರಿ ಅವರು ರಾಜ್ಯದ ಪ್ರಮುಖ ಒಬಿಸಿ ಸಮುದಾಯವಾದ ಕೊಯೇರಿ ಅಥವಾ ಕುಶ್ವಾಹ ಜಾತಿಗೆ ಸೇರಿದವರು. ಹಿಂದುಳಿದ ಜಾತಿಗಳಲ್ಲಿ, ಯಾದವರ ನಂತರ ಕುಶ್ವಾಹ ಅತಿ ದೊಡ್ಡ ಸಮುದಾಯವಾಗಿದೆ. ನಿತೀಶ್ ಕುಮಾರ್ ಅವರ ಜೆಡಿಯು, ಬಿಜೆಪಿಯನ್ನು ಈ ಜಾತಿಯ ಗುಂಪಿನಿಂದಲೇ ಮುಖ್ಯಮಂತ್ರಿಯನ್ನು ನೇಮಿಸುವಂತೆ ಕೇಳಿಕೊಂಡಿತ್ತು ಎನ್ನಲಾಗಿದೆ.
2005 ರಿಂದ ಬಿಜೆಪಿ ರಾಜ್ಯದಲ್ಲಿ ಕಿರಿಯ ಪಾಲುದಾರನಾಗಿತ್ತು. ಆದರೆ, ಉನ್ನತ ಹುದ್ದೆಯಲ್ಲಿ ತನ್ನದೇ ಆದ ನಾಯಕನನ್ನು ಹೊಂದಲು ಇಂದಿನವರೆಗೂ ಕಾಯಬೇಕಾಯಿತು. 243 ಸದಸ್ಯ ಬಲದ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಅವರ ಪಕ್ಷ 85 ಶಾಸಕರನ್ನು ಹೊಂದಿದೆ. ಬಿಜೆಪಿಗಿಂತ ಕೇವಲ ನಾಲ್ಕು ಶಾಸಕ ಸ್ಥಾನಗಳು ಕಡಿಮೆ ಇವೆ.

ನೋಡಿರಿ

