ಬಿಹಾರದಲ್ಲಿ10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವಿನ ನಂತರ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಗುರುವಾರ ದಾಖಲೆಯ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ: ಮೆಟ್ರೋ ನಿಲ್ದಾಣದಿಂದ ಹಾರಿ 10ನೇ ತರಗತಿಯ ವಿದ್ಯಾರ್ಥಿ ಸೂ*ಸೈಡ್
ಬಿಹಾರ ರಾಜ್ಯಪಾಲ ಆರಿಫ್ ಮೊಹ್ಮದ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇತರ ಹಲವಾರು ಕೇಂದ್ರ ಸಚಿವರು ಮತ್ತು 11 ಎನ್‌ಡಿಎ-ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಹೊಸ ಸರ್ಕಾರದಲ್ಲಿ ಬಿಜೆಪಿ 14 ಸಚಿವರನ್ನು ಹೊಂದಿರುತ್ತದೆ. ಸಿಎಂ ನಿತೀಶ್ ಜೊತೆಗೆ, ಜೆಡಿಯು ಏಳು ಸಚಿವರನ್ನು ಹೊಂದಿರುತ್ತದೆ. ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ಉಪೇಂದ್ರ ಕುಶ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ತಲಾ ಒಬ್ಬ ಸಚಿವರನ್ನು ಹೊಂದಿರುತ್ತದೆ.

ನೋಡಿರಿ

