ನಿವೇದಿತಾ ಚೊಚ್ಚಲ ಸಿನಿಮಾ ‘ಫೈರ್ ಫ್ಲೈ’ – ಮಗಳಿಗೆ ಶುಭಹಾರೈಸಿದ ಶಿವರಾಜ್ ಕುಮಾರ್

ನಿವೇದಿತಾ ಚೊಚ್ಚಲ ಸಿನಿಮಾ ‘ಫೈರ್ ಫ್ಲೈ’ – ಮಗಳಿಗೆ ಶುಭಹಾರೈಸಿದ ಶಿವರಾಜ್ ಕುಮಾರ್

ನವಿರಾಗಿ ಶುರುವಾದ ಕಥೆಗೆ ಹೆಸರೊಂದು ಮೂಡಿದೆ. ಹೆಸರ ಜೊತೆಗೆ ಬರುವೆವು ಎಂದು ಮೊದಲೇ ಹೇಳಿದಂತೆ ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಅವರ ಚೊಚ್ಚಲ ಸಿನಿಮಾ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಸಿನಿಮಾಕ್ಕೆ ‘ಫೈರ್ ಫ್ಲೈ’ ಎಂಬ ವಿಭಿನ್ನ ಶೀರ್ಷಿಕೆಯನ್ನು ಇಡಲಾಗಿದೆ.

ಇದನ್ನೂ ಓದಿ: ಚೊಚ್ಚಲ ಸಿನಿಮಾ ನಿರ್ಮಾಣಕ್ಕಿಳಿದ ನಿವೇದಿತಾ- ಸ್ಯಾಂಡಲ್‌ವುಡ್‌ನಲ್ಲಿ ಶಿವಣ್ಣನ ಮಗಳ ಹೊಸ ಅಧ್ಯಾಯ..!

ಬೆಂಗಳೂರಿನ ಕಾಡು ಮಲ್ಲೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಶಿವರಾಜ್‌ಕುಮಾರ್ ದಂಪತಿ ಮಗಳ ಚೊಚ್ಚಲ ನಿರ್ಮಾಣ ಸಿನಿಮಾಗೆ ಶುಭ ಹಾರೈಸಿದರು. ಈ ಚಿತ್ರದಲ್ಲಿ ಹೀರೋ ಆಗಿ ವಂಶಿ ಕಾಣಿಸಿಕೊಳ್ಳಲಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಪಿ.ಆರ್.ಕೆ ಪ್ರೊಡಕ್ಷನ್ಸ್ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ವಂಶಿ ಇತ್ತೀಚೆಗೆ ತೆರೆಕಂಡ ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ನಿವೇದಿತಾ ಬಂಡವಾಳ ಹೂಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಜರ್ನಿ ಆರಂಭಿಸುತ್ತಿದ್ದಾರೆ.

suddiyaana