ಗೃಹಲಕ್ಷ್ಮೀ ಯೋಜನೆಗೆ ನಾಳೆ ಅರ್ಜಿ ಸಲ್ಲಿಕೆ ಇಲ್ಲ! – ನಾಲ್ಕೈದು ದಿನ ಮುಂದೂಡಿಕೆ

ಗೃಹಲಕ್ಷ್ಮೀ ಯೋಜನೆಗೆ ನಾಳೆ ಅರ್ಜಿ ಸಲ್ಲಿಕೆ ಇಲ್ಲ! – ನಾಲ್ಕೈದು ದಿನ ಮುಂದೂಡಿಕೆ

ಬೆಂಗಳೂರು: ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆಯೂ ಒಂದು. ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅಂದರೆ ಜೂನ್ 16ರಿಂದ ಆನ್​ಲೈನ್, ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ ಮಾಡಿದ್ದರು. ಆದರೆ ಸರ್ಕಾರದ ಕ್ಯಾಬಿನೆಟ್‌ ಸಭೆಯ ಬಳಿಕ ಈ ಗ್ಯಾರಂಟಿ ಜಾರಿ ಮುಂದೂಡಿಕೆ ಮಾಡಲಾಗಿದೆ.

ಇದನ್ನೂ ಓದಿ: ಜೂನ್ 16ರಿಂದಲೇ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ – ಯಾವ್ಯಾವ ಮಾಹಿತಿ ಸಲ್ಲಿಕೆ ಮಾಡಬೇಕು ಗೊತ್ತಾ?

ಗುರುವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕಾ ಪ್ರಕಟಣೆಯಲ್ಲಿ ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್​, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದರು. ಆದರೆ ಗುರುವಾರ ನಡೆದ ಕ್ಯಾಬಿನೆಟ್‌ ಸಭೆಯ ಬಳಿಕ ಶುಕ್ರವಾರ ಯೋಜನೆ ಲಾಂಚ್‌ ಆಗುವುದಿಲ್ಲ. ಕನಿಷ್ಠ ನಾಲ್ಕೈದು ದಿನಗಳ ಕಾಲ ಗೃಹ ಲಕ್ಷ್ಮೀ ಯೋಜನೆ ಮುಂದೂಡಿಕೆ ಮಾಡಲಾಗಿದೆ. ಯೋಜನೆ ಅರ್ಜಿ ಭರ್ತಿ ಮಾಡಲು ಬೇರೆ ಬೇರೆ ಅವಕಾಶ ಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿಸಲ್ಲಿಸುವವರು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. (https://sevasindhugs.karnataka.gov.in/gruhalakshmi)  ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ. ಮಂಜೂರಾತಿಯ ನಂತರ DBT ಮೂಲಕ ನೇರ ನಗದು ವರ್ಗಾವಣೆ ಮಾಡಲಾಗುವುದು. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.

suddiyaana