ಬೆಂಗಳೂರಿನಲ್ಲಿ ಪ್ರಧಾನಿ ರೋಡ್‌ ಶೋ ಇರಲ್ಲ – ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬೆಂಗಳೂರಿನಲ್ಲಿ ಪ್ರಧಾನಿ ರೋಡ್‌ ಶೋ ಇರಲ್ಲ – ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

ಬೆಂಗಳೂರು: ಚಂದ್ರಯಾನ ಯಶಸ್ವಿಯಾದ ಹಿನ್ನೆಲೆ ಶನಿವಾರ ಪ್ರಧಾನಿ ಮೋದಿ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಆಗಮಿಸಿ ವಿಜ್ಞಾನಿಗಳಿಗೆ ಅಭಿನಂದಿಸಲಿದ್ದಾರೆ. ಪ್ರಧಾನಿ ಆಗಮನದ ಹಿನ್ನೆಲೆ ರಾಜ್ಯ ಬಿಜೆಪಿ ನಾಯಕರು ಅದ್ದೂರಿ ರೋಡ್‌ ಶೋ ಏರ್ಪಡಿಸಲಾಗುತ್ತದೆ ಎಂದು ಹೇಳಲಾಗಿತ್ತು. ಇದೀಗ ರೋಡ್​ ಶೋ ಆಯೋಜನೆ ಆಗಿಲ್ಲ ಎಂದು ಕೇಂದ್ರ ಸಚಿವೆ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಸಚಿವೆ ಶೋಭಾ ಕರಂದ್ಲಾಜೆ, ಶನಿವಾರ ಬೆಳಗ್ಗೆ ಎಚ್‍ಎಎಲ್ ಏರ್​ಪೋರ್ಟ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತ ಕೋರಲಾಗುವುದು. ಬಳಿಕ ಇಸ್ರೋ ಸೆಂಟರ್ ಗೆ ಪ್ರಧಾನಿಯವರು ತೆರಳಲಿದ್ದಾರೆ. ಅಲ್ಲಿ ಇಸ್ರೋ ವಿಜ್ಞಾನಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಉಳಿದಂತೆ ಯಾವುದೇ ಕಾರ್ಯಕ್ರಮಗಳಿರುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಶನಿವಾರ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ – ಸಂಚಾರದಲ್ಲಿ ಭಾರಿ ಬದಲಾವಣೆ

ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗುವ ಸಮಯ ಹತ್ತಿರವಾಗುತ್ತಿದೆ. ಭಾರತ ಮಾತ್ರವಲ್ಲ ವಿಶ್ವಕ್ಕೇ ಇವರ ನಾಯಕತ್ವ ಬೇಕು. ಹೀಗಾಗಿ ಬಿಜೆಪಿಯಿಂದ ನಡೆಯುತ್ತಿರುವ ಮತದಾರರ ಚೇತನ ಮಾಹಾಚೇತನ ಅಭಿಯಾನದ ಆಯೋಜಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯ ಸೇರ್ಪಡೆಯ ಬಗ್ಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಯುವ ಜನತೆಗೆ ಇದರ ಬಗ್ಗೆ ಜಾಗೃತಿ, ಹೊಸ ಮತದಾರರ ಸೇರ್ಪಡೆ, ವಿಳಾಸ ಬದಲಾವಣೆ, ನಿಧನರಾದವರ ಹೆಸರಿನ ಕಡಿತ, ನಕಲಿ ಮತದಾರರನ್ನು ಗುರುತಿಸುವಿಕೆ ಹೀಗೆ ಅನೇಕ ಕಾರ್ಯಗಳನ್ನು ಬಿಜೆಪಿ ಕೈಗೆತ್ತುಕೊಳ್ಳಲಿವೆ ಎಂದು ಮತದಾರರ ಚೇತನ ಮಾಹಾಚೇತನ ಅಭಿಯಾನದ ಕುರಿತು ತಿಳಿಸಿದರು.

suddiyaana