‘ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆʼ ಹೇಳಿಕೆ – ನಟ ದರ್ಶನ್‌ಗೆ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್‌

‘ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆʼ ಹೇಳಿಕೆ – ನಟ ದರ್ಶನ್‌ಗೆ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್‌

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಕಾನೂನು ಸಂಕಷ್ಟ ಎದುರಾಗಿದೆ. ವಿವಾದಾತ್ಮಕ ಹೇಳಿಕೆ ನೀಡಿದ್ದ ನಟನಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ.

ಇದನ್ನೂ ಓದಿ: ಸರ್ಕಾರಕ್ಕೆ ಜಾತಿಗಣತಿ ಸಮೀಕ್ಷೆಯ ವರದಿ ಸಲ್ಲಿಕೆ – ಬಿಜೆಪಿ ನಾಯಕರ ವಿರೋಧದ ನಡುವೆ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ನಟ ದರ್ಶನ್ ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಾರ್ವಜನಿಕ ಸಮಾರಂಭದಲ್ಲಿ ದರ್ಶನ್ ಅವರು ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ ಎಂದು ವೇದಿಕೆಯ ಮೇಲೆಯೇ ಹೇಳಿದ್ದಾರೆ.

ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಪ್ರತಿಭಟನೆ ನಡೆಸಿದ್ದ ಗೌಡತಿಯರ ಸೇನೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಗೌಡತಿಯರ ಸೇನೆ ರಾಜ್ಯಾಧ್ಯಕ್ಷರಾದ ಶ್ರೀಮತಿ ರೇಣುಕಾ ಅವರ ದೂರಿನ ಮೇರೆಗೆ ರಾಜ್ಯ ಮಹಿಳಾ ಆಯೋಗ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ 10 ದಿನದಲ್ಲಿ ಈ ಕುರಿತು ವಿವರಣೆ ನೀಡಲು ಸೂಚಿಸಲಾಗಿದೆ.

Shwetha M