ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿಯಲ್ಲಿ ನಿಯಮ ಉಲ್ಲಂಘನೆ – ದರ್ಶನ್, ರಾಕ್ ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಶ್‌ಗೆ ನೋಟಿಸ್
ಕಾಟೇರ ಸಿನಿಮಾ ಭರ್ಜರಿ ಸಕ್ಸಸ್ ಕಾಣುತ್ತಿದೆ. ಚಿತ್ರತಂಡ ಕೂಡಾ ಗೆಲುವನ್ನು ಸೆಲೆಬ್ರೇಟ್ ಮಾಡಿದೆ. ಆದ್ರೀಗ ಇದೇ ಸೆಲಬ್ರೇಷನ್ನಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿ ಬಂದಿದ್ದು ಪೊಲೀಸರು ನೋಟಿಸ್ ನೀಡಿದ್ದಾರೆ. ಜೆಟ್ ಲಾಗ್ ಪಬ್ನಲ್ಲಿ ಮುಂಜಾನೆವರೆಗೂ ಸೆಲೆಬ್ರಿಟಿಗಳು ಪಾರ್ಟಿ ಮಾಡಿದ್ದು, ಸುಬ್ರಮಣ್ಯನಗರ ಪೊಲೀಸರು ನೋಟಿಸ್ ನೀಡಿದ್ದಾರೆ. ದರ್ಶನ್, ರಾಕ್ ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಶ್, ಚಿಕ್ಕಣ್ಣ, ಪ್ರಜ್ವಲ್ ದೇವರಾಜ್ ಸೇರಿದಂತೆ ಕೆಲ ಸೆಲೆಬ್ರಿಟಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ.
ಇದನ್ನೂ ಓದಿ: ಬಿಗ್‌ಬಾಸ್ ಮನೆಯಿಂದ ಮೈಕಲ್ ಔಟ್ – ವಿನಯ್ ಟೀಮ್‌ನ ಮತ್ತೊಂದು ವಿಕೆಟ್ ಪತನ
ಇತ್ತೀಚೆಗೆ ‘ಕಾಟೇರ’ ಸಿನಿಮಾ ರಿಲೀಸ್ ಆಗಿ ಗೆದ್ದಿತು. ಅದರ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಅಭಿಷೇಕ್ ಅಂಬರೀಷ್, ಧನಂಜಯ್ ಸೇರಿ ಅನೇಕರು ಬೆಂಗಳೂರಿನ ಒರಾಯನ್ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್ನಲ್ಲಿ ಪಾರ್ಟಿ ಮಾಡಿದ್ದರು. ಇತ್ತೀಚೆಗೆ ಜೆಟ್ ಲ್ಯಾಗ್ ಪಬ್ನಲ್ಲಿ ದರ್ಶನ್ ಅಭಿಷೇಕ್ ಅಂಬರೀಷ್ ಸೇರಿ ಅನೇಕ ಸೆಲೆಬ್ರೆಟಿಗಳು ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ಈ ಪ್ರಕರಣ ಸಾಕಷ್ಟು ಸುದ್ದಿ ಆಗಿತ್ತು. ಈ ಪ್ರಕರಣದಲ್ಲಿ ಪಬ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ಗೆ ನೋಟಿಸ್ ಜಾರಿ ಆಗಿದೆ. ಸುಬ್ರಹ್ಮಣ್ಯನಗರ ಇನ್ಸ್ಪೆಕ್ಟರ್ ಸುರೇಶ್ ಅವರಿಂದ ಮೂವರಿಗೂ ನೋಟಿಸ್ ಜಾರಿ ಆಗಿದೆ. ನಟರಾದ ಡಾಲಿ ಧನಂಜಯ್, ಚಿಕ್ಕಣ್ಣ, ನಿನಾಸಂ ಸತೀಶ್ ಹಾಗೂ ನಿರ್ದೇಶಕ ತರುಣ್ ಸುಧೀರ್ಗೆ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಜನವರಿ 3ರಂದು ರಾತ್ರಿ ಪಬ್‌ನಲ್ಲಿ ಬೆಳಗಿನ ಜಾವದವರೆಗೆ ಪಾರ್ಟಿ ನಡೆದಿತ್ತು. ನಿಯಮದ ಪ್ರಕಾರ ತಡರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ಓಪನ್ ಇಡಲು ಅವಕಾಶ ಇದೆ. ಆದರೆ, ನಿಯಮವನ್ನು ಇಲ್ಲಿ ಮೀರಲಾಗಿದೆ. ಸದ್ಯ ಚಿತ್ರತಂಡ ವಿದೇಶದಲ್ಲಿದೆ ಎನ್ನಲಾಗಿದೆ.