ಬಿಜೆಪಿಯಲ್ಲೂ ನವೆಂಬರ್‌ ಕ್ರಾಂತಿ.. ನಿತಿನ್ ಗಡ್ಕರಿ ಮುಂದಿನ ಪ್ರಧಾನಿ! –  ಸಂತೋಷ್‌ ಲಾಡ್‌ ಬಾಂಬ್‌

ಬಿಜೆಪಿಯಲ್ಲೂ ನವೆಂಬರ್‌ ಕ್ರಾಂತಿ.. ನಿತಿನ್ ಗಡ್ಕರಿ ಮುಂದಿನ ಪ್ರಧಾನಿ! –  ಸಂತೋಷ್‌ ಲಾಡ್‌ ಬಾಂಬ್‌

ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ನವೆಂಬರ್ ತಿಂಗಳಿಗೆ ಕಾಂಗ್ರೆಸ್ ಸರ್ಕಾರ ಎಡುವರೆ ವರ್ಷ ಪೂರ್ಣಗೊಳಿಸುತ್ತೆ. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಬದಲಾಗಿ ರಾಜ್ಯದ ಸಿಎಂ ಡಿಕೆ ಶಿವಕುಮಾರ್ ಆಗಬೇಕು ಎಂಬ ಚರ್ಚೆಗಳು ಶುರುವಾಗಿದೆ. ಇದೀಗ ಕೇಂದ್ರ ಬಿಜೆಪಿಯಲ್ಲೂ ನವೆಂಬರ್‌ ಕ್ರಾಂತಿ ನಡೆಯಲಿದೆ ಎಂದು ಸಚಿವ ಸಂತೋಷ್‌ ಲಾಡ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಇದನ್ನೂ ಓದಿ: ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್!‌ – ಏಕಾಏಕಿ ಟಿಕೆಟ್ ದರ ಹೆಚ್ಚಿಸಿದ ಖಾಸಗಿ ಬಸ್​ಗಳು!

ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್‌ ಲಾಡ್‌, ಡಿನ್ನರ್‌ ಮೀಟಿಂಗ್‌ನಲ್ಲಿ ಸಂಪುಟ ಪುನರ್‌ ರಚನೆ ಬಗ್ಗೆ ಮಾತನಾಡಿಲ್ಲ. ಸಂಪುಟ ಪುನರ್‌ರಚನೆ ಮಾಡುವುದಾದ್ರೆ ಸಿಎಂ ಡಿಸಿಎಂಗೆ ಪೂರ್ಣ ಅಧಿಕಾರ ಇದೆ, ಮಾಡಲಿ. ಅಲ್ಲದೇ ಕೇಂದ್ರ ಬಿಜೆಪಿಯಲ್ಲೂ ನವೆಂಬರ್‌ ಕ್ರಾಂತಿ ಇದೆ. ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಕಾಂಗ್ರೆಸ್‌ಗೆ ಗ್ಯಾರೆಂಟಿ ಹೊರೆಯಿಂದ ಅಭಿವೃದ್ಧಿ ಕುಂಟಿತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಲಾಡ್, ನಮ್ಮ ಗ್ಯಾರಂಟಿಗಳನ್ನ ಹಿಡಿದುಕೊಂಡು ಮೋದಿ ಓಡಾಡುತ್ತಿದ್ದಾರೆ. ಬಿಹಾರ್ ಎಲೆಕ್ಷನ್‌ನಲ್ಲಿ ಮಹಿಳೆಯರಿಗೆ ಒಂದು ಮತಕ್ಕೆ 10 ಸಾವಿರ ರೂ. ಕೊಡುತ್ತಿದ್ದಾರೆ. ಮೋದಿ ಸಾಹೇಬ್ರು ನಮ್ಮ ಗ್ಯಾರಂಟಿಗಳನ್ನ ಬಿಹಾರ ಚುನಾವಣೆಯಲ್ಲಿ ಬಳಸುತ್ತಿದ್ದಾರೆ ಎಂದು ಕಿಡಿ ಕಾರಿದರು.

ಇನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಆರ್‌ಎಸ್‌ಎಸ್‌ ಬ್ಯಾನ್‌ ಬಗ್ಗೆ ಮಾತನಾಡಿ, 145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ ಆರ್‌ಎಸ್‌ಎಸ್‌ಗೆ ವಿಶೇಷವಾಗಿ ದೇಶ ಪ್ರೇಮ ಇಲ್ಲ. ಈ ಹಿಂದೇ 3 ಸಾವಿರ ಕೋಟಿ ಖರ್ಚು ಮಾಡಿ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆ ನಿರ್ಮಾಣ ಮಾಡಿದ್ದು ಅವರು ಕಾಂಗ್ರೆಸ್‌ನಲ್ಲಿ ಇದ್ದಾಗ ಪ್ರತಿಮೆ ಮಾಡಲು ಬಿಜೆಪಿ ವಿರೋಧ ಮಾಡಿದ್ರು ಎಂದು ಕುಟುಕಿದರು.

Shwetha M