ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿ – ಮುಂದಿನ ತಿಂಗಳು ರಾಹುಲ್ ಗಾಂಧಿ ಬೆಂಗಳೂರಿಗೆ?

ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರ ಭಾರಿ ಸದ್ದು ಮಾಡುತ್ತಿದೆ. ರಾಜ್ಯದಲ್ಲಿ ನವೆಂಬರ್, ಡಿಸೆಂಬರ್ ನಲ್ಲಿ ದೊಡ್ಡ ಕ್ರಾಂತಿ ಆಗೋದು ನಿಶ್ಚಿತ ಎಂಬ ಮಾತು ಕೇಳಿಬಂದಿದೆ. ಈ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ರಾಹುಲ್‌ಗಾಂಧಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗ್ತಿದೆ.
ಇದನ್ನೂ ಓದಿ: ಕಾವೇರಿ, ಕೃಷ್ಣಾನದಿ ಜೀವ ಜಲ ಆಗಿ ಉಳಿದಿಲ್ಲ – 12 ನದಿಗಳ ನೀರು ಕುಡಿಯಲು ಯೋಗ್ಯವಿಲ್ಲ..!
ರಾಜ್ಯದಲ್ಲಿ ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ನಡುವಲ್ಲೇ ನವೆಂಬರ್ 19 ರಂದು ರಾಹುಲ್ ಗಾಂಧಿ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕರ್ನಾಟಕದಲ್ಲಿ ಸ್ಥಾಪನೆಯಾದ ಅಂಗನವಾಡಿಗಳ 50 ನೇ ವಾರ್ಷಿಕೋತ್ಸವದ ಅಂಗನವಾಡಿ ಕಾರ್ಯಕರ್ತರ ರ್ಯಾಲಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹೈಕಮಾಂಡ್ ನಾಯಕರನ್ನು ಆಹ್ವಾನಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಸಹ ಆಹ್ವಾನಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ನೋಡಿರಿ

