ಭಾರತ-ಶ್ರೀಲಂಕಾ ನಡುವಿನ ಏಕದಿನ ಸರಣಿ – ಬುಮ್ರಾ ಆಗಿಲ್ಲ ಫಿಟ್, ರಾಹುಲ್ ಆಡೋದು ಡೌಟ್

ಭಾರತ-ಶ್ರೀಲಂಕಾ ನಡುವಿನ ಏಕದಿನ ಸರಣಿ – ಬುಮ್ರಾ ಆಗಿಲ್ಲ ಫಿಟ್, ರಾಹುಲ್ ಆಡೋದು ಡೌಟ್

ಭಾರತ-ಶ್ರೀಲಂಕಾ ನಡುವಿನ ಏಕದಿನ ಸರಣಿ ಜನವರಿ 10ರಿಂದ ಆರಂಭವಾಗಲಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ. ಈ ಸರಣಿಯ ಮೂಲಕ ಟೀಮ್ ಇಂಡಿಯಾದ ಹಿರಿಯ ಆಟಗಾರರು ತಂಡಕ್ಕೆ ಮರಳಿದ್ದಾರೆ. ಆದರೆ ಜನವರಿ 10ರಿಂದ ಆರಂಭವಾಗುವ ಪಂದ್ಯದಲ್ಲಿ ಜಸ್ಪ್ರಿತ್ ಬುಮ್ರಾ ಕೂಡಾ ಹೊರಗುಳಿದಿದ್ದಾರೆ. ಶ್ರೀಲಂಕಾ ವಿರುದ್ಧ ಏಕದಿನ ಸರಣಿಗಾದ್ರೂ ಬುಮ್ರಾ ತಂಡವನ್ನ ಸೇರಿಕೊಳ್ತಾರೆ ಅನ್ನೋ ನಿರೀಕ್ಷೆ ಇತ್ತು. ಆದ್ರೀಗ ಅದು ಕೂಡ ಹುಸಿಯಾಗಿದೆ. ಬುಮ್ರಾ ಇನ್ನೂ ಕೂಡ ಫಿಟ್ ಆಗಿಲ್ಲ. ಗಾಯದ ಸಮಸ್ಯೆಯಿಂದ ಹಲವು ತಿಂಗಳುಗಳ ಕಾಲ ದೂರವಿದ್ದ ಬುಮ್ರಾ ಈಗಷ್ಟೇ ಚೇತರಿಸಿಕೊಂಡಿದ್ದು, ತಮ್ಮ ಎಂದಿನ ಬೌಲಿಂಗ್​ಗೆ ಹೊಂದಿಕೊಳ್ಳಲು ಇನ್ನೂ ಒಂದಷ್ಟು ಸಮಯಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಲಂಕಾ ವಿರುದ್ಧದ ಸರಣಿಯಲ್ಲೂ ಬುಮ್ರಾ ಆಡ್ತಿಲ್ಲ. ಇನ್ನು ಶ್ರೀಲಂಕಾ ವಿರುದ್ಧದ ಸರಣಿ ವೇಳೆ ಬುಮ್ರಾ ಸ್ಥಾನವ್ನ ತುಂಬೋದು ಯಾರು ಅನ್ನೋದು ಇನ್ನಷ್ಟೇ ನಿರ್ಧಾರವಾಗಬೇಕಿದೆ.

ಇದನ್ನೂ ಓದಿ:  ರಿಷಬ್ ಪಂತ್ ಮತ್ತು ಊರ್ವಶಿ ರೌಟೇಲಾ ನಡುವೆ ಸಮ್‌ಥಿಂಗ್ ಸಮ್‌ಥಿಂಗ್‌ ?

ಇನ್ನು ಆರಂಭಿಕರಾಗಿ ಯಾರು ಬ್ಯಾಟ್ ಬೀಸಲಿದ್ದಾರೆ ಅನ್ನೋ ಕುತೂಹಲವೂ ಇದೆ. ಆರಂಭಿಕರಾಗಿ ರೋಹಿತ್ ಶರ್ಮಾ, ಇಶಾನ್ ಕಿಶನ್, ಶುಭ್ಮನ್ ಗಿಲ್ ಹಾಗೂ ಕೆಎಲ್ ರಾಹುಲ್ ತಂಡದಲ್ಲಿದ್ದಾರೆ. ಈ ನಾಲ್ವರಲ್ಲಿ ಇಬ್ಬರನ್ನು ಆರಂಭಿಕರಾಗಿ ಆಯ್ಕೆ ಮಾಡಬೇಕಿದೆ. ಮತ್ತೊಂದೆಡೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ಗಳಾಗಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಇರುವ ಕಾರಣ ಯಾರಿಗೆ ಚಾನ್ಸ್ ನೀಡಬೇಕೆಂಬ ಸವಾಲು ಕೂಡ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಮುಂದಿದೆ. ಅತ್ತ ಶುಭ್ಮನ್ ಗಿಲ್ ಏಕದಿನ ಕ್ರಿಕೆಟ್‌ಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಜೊತೆ ಗಿಲ್‌ಗೆ ಅವಕಾಶ ಸಿಗಬಹುದು. ಮತ್ತೊಂದೆಡೆ ಕಳೆದ ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಮಿಂಚಿದ್ದ ಇಶಾನ್ ಕಿಶನ್ ಕೂಡ ವಿಕೆಟ್ ಕೀಪರ್ ಸ್ಥಾನದಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದಾರೆ. ಇದರಿಂದ ಕೆಎಲ್ ರಾಹುಲ್ ಅವಕಾಶ ವಂಚಿತರಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸುವುದು ಖಚಿತ ಎನ್ನಬಹುದು. ಆದರೆ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಶ್ರೇಯಸ್ ಅಯ್ಯರ್ ನಡುವೆ ಪೈಪೋಟಿ ಇದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ಹೊರಗುಳಿಯಬೇಕಾಗಿ ಬರಬಹುದು. ಒಂದು ವೇಳೆ ಶುಭ್ಮನ್ ಗಿಲ್ ಅವರನ್ನು ಹೊರಗಿಟ್ಟರೆ ಮಾತ್ರ ಕೆಎಲ್ ರಾಹುಲ್‌ಗೆ ಚಾನ್ಸ್ ಸಿಗಬಹುದು. ಅಂದರೆ ಗಿಲ್ ಬದಲಿಗೆ ಇಶಾನ್ ಕಿಶನ್ ಆರಂಭಿಕರಾಗಿ ಆಡಿದ್ರೆ, ಕೆಎಲ್ ರಾಹುಲ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಇಲ್ಲದಿದ್ರೆ ಇಶಾನ್ ಕಿಶನ್ ಆ ಸ್ಥಾನದಲ್ಲಿ ಆಡಲಿದ್ದಾರೆ.

suddiyaana