ಒಡಿಶಾದ ರೈಲು ದುರಂತ – ವರದಿ ಸಲ್ಲಿಸುವಂತೆ ಸಿಎಸ್‌ಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಒಡಿಶಾದ ರೈಲು ದುರಂತ – ವರದಿ ಸಲ್ಲಿಸುವಂತೆ ಸಿಎಸ್‌ಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಒಡಿಶಾದ ರೈಲು ದುರಂತಕ್ಕೆ ಸಂಬಂಧಿಸಿದಂತೆ ಸಿಎಸ್ ವಂದಿತಾ ಶರ್ಮಾ ಅವರು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಕರ್ನಾಟಕದ ಎಷ್ಟು ಪ್ರಯಾಣಿಕರು ದುರಂತ ನಡೆದ ರೈಲಿನಲ್ಲಿದ್ದರು. ರೈಲು ದುರಂತದಿಂದ ನಮ್ಮ ರಾಜ್ಯದವರಿಗೆ ಏನಾದರು ಆಗಿದೆಯಾ? ಎಂಬ ಬಗ್ಗೆ ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಇನ್ನು ಈ ಸಂಬಂಧ ವರದಿ ಸಲ್ಲಿಸುವಂತೆ ಸಿಎಸ್‌ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಒಡಿಶಾದಲ್ಲಿ ಭೀಕರ ರೈಲು ದುರಂತ – ಕರ್ನಾಟಕದ ಎಲ್ಲಾ ಪ್ರಯಾಣಿಕರು ಸೇಫ್

ಇನ್ನು ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅವರಿಗೆ ಅಗತ್ಯ ನೆರವನ್ನು ಒದಗಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಧ್ಯಾಹ್ನ 2.30 ಕ್ಕೆ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ಭುವನೇಶ್ವರಕ್ಕೆ ತೆರಳಿದ್ದಾರೆ. ಚಾರ್ಟರ್ಡ್ ಫ್ಲೈಟ್ ಮೂಲಕ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ತಂಡದ ಜೊತೆ ತೆರಳಿದ್ದು ಕನ್ನಡಿಗರ ಸುರಕ್ಷತೆ ಬಗ್ಗೆ ರೈಲ್ವೇ ಡಿಐಜಿಯಿಂದ ಮಾಹಿತಿ ಪಡೆಯಲಿದ್ದಾರೆ. ಸದ್ಯ, ದೂರವಾಣಿ ಮೂಲಕ ರೈಲ್ವೆ ಡಿಐಜಿ ಶಶಿಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ.

suddiyaana