ಒಡಿಶಾ ರೈಲು ದುರಂತ – ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ಒಡಿಶಾ ರೈಲು ದುರಂತ – ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ಒಡಿಶಾದ ಬಾಲಸೋರ್‌ ನಲ್ಲಿ ಶುಕ್ರವಾರ ಸಂಜೆ ಭೀಕರ ರೈಲು ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಸುಮಾರು 300 ಮಂದಿ ಸಾವನ್ನಪ್ಪಿದ್ದು,1000 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ.

ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಘಟನೆ ನಡೆದ ಸ್ಥಳದ ಬಳಿ ಪ್ರಧಾನಿ ಮೋದಿ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಂದಿಳಿದರು. ಅಪಘಾತದಲ್ಲಿ ಗಾಯಗೊಂಡವರನ್ನು ಬಾಲಸೋರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರನ್ನೂ ಮೋದಿ ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: ಅದೇ ಶುಕ್ರವಾರ.. ಅದೇ ಸಂಜೆಯ ಸಮಯ..! – ಮತ್ತೆ ದುರಂತ ಕಂಡ ಅದೇ ಕೋರಮಂಡಲ್ ಎಕ್ಸ್‌ಪ್ರೆಸ್‌..!

ಶುಕ್ರವಾರ ಸಂಜೆ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪ್ಯಾಸೆಂಜರ್ ರೈಲುಗಳ 17 ಬೋಗಿಗಳು ಹಳಿ ತಪ್ಪಿ ತೀವ್ರವಾಗಿ ಹಾನಿಗೀಡಾಗಿವೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಾಥಮಿಕ ವರದಿಯ ಪ್ರಕಾರ, 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ 7 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳು, 5 ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕಗಳು ಮತ್ತು 24 ಅಗ್ನಿಶಾಮಕ ಸೇವೆಗಳು ಮತ್ತು ತುರ್ತು ಘಟಕಗಳು ರಕ್ಷಣಾ ಇವೆ. ಭಾರತೀಯ ವಾಯುಪಡೆ ಮೃತರು ಮತ್ತು ಗಾಯಗೊಂಡವರ ಸ್ಥಳಾಂತರಕ್ಕಾಗಿ Mi-17 ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿದೆ. ಈಸ್ಟರ್ನ್ ಕಮಾಂಡ್ ಪ್ರಕಾರ, IAF ನಾಗರಿಕ ಆಡಳಿತ ಮತ್ತು ಭಾರತೀಯ ರೈಲ್ವೆಯೊಂದಿಗೆ ರಕ್ಷಣಾ ಪ್ರಯತ್ನಗಳನ್ನು ಸಂಯೋಜಿಸುತ್ತಿದೆ. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಸ್ಥಳಕ್ಕೆ ಭೇಟಿ ನೀಡಿ ಉನ್ನತ ಮಟ್ಟದ ತನಿಖೆಗೆ ನಿರ್ದೇಶನ ನೀಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

suddiyaana