ಒಡಿಶಾ ರೈಲು ದುರಂತ: ತುರ್ತು ಸಭೆ ನಡೆಸುತ್ತಿರುವ ಪ್ರಧಾನಿ – ಘಟನಾ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ
ನವದೆಹಲಿ: ಒಡಿಶಾದ ಬಾಲಸೋರ್ ಭೀರಕ ರೈಲು ಅಪಘಾತ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತುರ್ತುಸಭೆ ನಡೆಸುತ್ತಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಒಡಿಶಾದಲ್ಲಿ ಭೀಕರ ರೈಲು ದುರಂತ – ಕರ್ನಾಟಕದ ಎಲ್ಲಾ ಪ್ರಯಾಣಿಕರು ಸೇಫ್
ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 238ಕ್ಕೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ತುರ್ತು ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ಪಡೆಯ ಮುಖ್ಯಸ್ಥರು, ರೈಲ್ವೇ ಸಚಿವಾಲಯ ಮುಖ್ಯಸ್ಥರು ಉಪಸ್ಥಿತರಿದ್ದಾರೆ.
ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೊದಲು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ನಂತರ ಕಟಕ್‌ನ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.