ಶನಿವಾರ ನೇರಳೆ ಮಾರ್ಗದ ಮೆಟ್ರೋ ಸಂಚಾರ ಕೆಲ ಕಾಲ ಸ್ಥಗಿತ!
ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ಮಹತ್ವದ ಸುದ್ದಿಯೊಂದಿದೆ. ಶನಿವಾರ (ಜ.27) ನೇರಳೆ ಮಾರ್ಗದ ಮೆಟ್ರೋ ಸಂಚಾರ ಕೆಲಕಾಲ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.
ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗೆ ಟಕ್ಕರ್ ಕೊಡಲು ಬಿಜೆಪಿಯ ಅಸ್ತ್ರ ಏನು? – ಲೋಕಸಮರ ಗೆಲ್ಲೋಕೆ ಕಮಲ ಪಡೆಯ ಪ್ಲಾನ್ ಏನು?
ನೇರಳೆ ಮಾರ್ಗದಲ್ಲಿ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆ ಶನಿವಾರ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಎಂಜಿ ರೋಡ್ ನಿಂದ ಬೈಯಪ್ಪನಹಳ್ಳಿ ಮಾರ್ಗ ಸಂಚಾರ ಬಂದ್ ಆಗಲಿದೆ. ಎಂಜಿ ರೋಡ್-ಚಲ್ಲಘಟ್ಟ, ಬೈಯಪ್ಪನಹಳ್ಳಿ- ವೈಟ್ ಫೀಲ್ಡ್ ಕಾಡುಗೋಡಿ ಮಾರ್ಗದಲ್ಲಿ ಸಂಚಾರ ವ್ಯತ್ಯಯವಿಲ್ಲ. ಕೆಲವೇ ಗಂಟೆಯಲ್ಲಿ ಸಮಸ್ಯೆ ಬಗೆಹರಿಸುವ ಬಗ್ಗೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಿದ್ದಾರೆ. ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಿಎಂಆರ್ಸಿಎಲ್ ವಿಷಾದ ವ್ಯಕ್ತಪಡಿಸಿದೆ.
ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಖ್ಯೆ ಬರೋಬ್ಬರಿ 100 ಕೋಟಿ ದಾಟಿದೆ. ಹೌದು, ಮೆಟ್ರೋ ಶುರುವಾದಾಗಿನಿಂದ ಈವರೆಗೆ ಪ್ರಯಾಣಿಸಿದವರ ಸಂಖ್ಯೆ ಶತ ಕೋಟಿ ಮೀರಿದೆ. 2011, ಅಂದರೆ ಬರೋಬ್ಬರಿ 12 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಆರಂಭವಾಗಿತ್ತು, ಅಂದಿನಿಂದ ಇಂದಿನವರೆಗೂ ದಿನನಿತ್ಯ ನಮ್ಮ ಮೆಟ್ರೋ ಪ್ರಯಾಣಿಕರ ಜೀವನದ ಅವಿನಾಭಾವ ಚಲಿಸುವ ಅಂಗವೇ ಆಗಿಹೋಗಿದೆ.