ಸೆ. 21 ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ಭಾರಿ ವ್ಯತ್ಯಯ! – ಈ ಮಾರ್ಗದಲ್ಲಿ ಮೆಟ್ರೋ ಸೇವೆ ಇರಲ್ಲ?

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದೆ. ಇಂದು (ಗುರುವಾರ) ಮೆಟ್ರೋ ಸಂಚಾರದಲ್ಲಿ ಭಾರಿ ವ್ಯತ್ಯಯವಾಗಲಿದೆ. ಬೈಯಪ್ಪನಹಳ್ಳಿಯಿಂದ ಕೆಆರ್ ಪುರ ಮೆಟ್ರೋ ನಿಲ್ದಾಣದ ನಡುವಿನ ಮಾರ್ಗದ ಸುರಕ್ಷತಾ ಪರೀಶೀಲನೆ ನಡೆಯುವ ಹಿನ್ನೆಲೆಯಲ್ಲಿ ಕೆಆರ್ ಪುರದಿಂದ ಗರುಡಾಚಾರ್‌ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಇನ್ಮುಂದೆ ಎಲ್ಲಾ ಟ್ವಿಟರ್ ಬಳಕೆದಾರರಿಗೆ ಮಾಸಿಕ ಶುಲ್ಕ? – ಎಲಾನ್ ಮಸ್ಕ್ ಹೇಳಿದ್ದೇನು?
ಗುರುವಾರ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ಬೈಯಪ್ಪನಹಳ್ಳಿ-ಕೆ.ಆರ್.ಪುರ ಮಾರ್ಗದ ಸುರಕ್ಷತಾ ಪರಿಶೀಲನೆ ಕೈಗೊಂಡಿದ್ದಾರೆ. ಹೀಗಾಗಿ, ಮೆಟ್ರೊ ರೈಲು ಕಾರ್ಯಾಚರಣೆಯಲ್ಲಿಬದಲಾವಣೆ ಮಾಡಲಾಗಿದೆ. ಸೆ. 21ರಂದು ದಿನವಿಡೀ ಕೆ.ಆರ್.ಪುರ-ಗರುಡಾಚಾರ್‌ಪಾಳ್ಯ ನಿಲ್ದಾಣದವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.
ಇನ್ನು ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 4.30ರವರೆಗೆ ಮೆಟ್ರೊ ರೈಲು ಸೇವೆ ಇರುವುದಿಲ್ಲ. ವೈಟ್‌ಫೀಲ್ಡ್ (ಕಾಡುಗೋಡಿ) ಗರುಡಾಚಾರ್‌ಪಾಳ್ಯದ ನಡುವೆ ಎಂದಿನಂತೆ ಮೆಟ್ರೊ ರೈಲುಗಳು ಸಂಚರಿಸಲಿವೆ. ಹಾಗೆಯೇ, ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1.30 ರಿಂದ ಸಂಜೆ 4.30ರವರೆಗೆ ರೈಲು ಸೇವೆ ಇರುತ್ತದೆ.
ಮಧ್ಯಾಹ್ನ 1.30ವರೆಗೆ ಮತ್ತು ಸಂಜೆ 4.30ರ ನಂತರ ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ರೈಲುಗಳು ಎಂದಿನಂತೆ ರಾತ್ರಿ 11 ರವರೆಗೆ ಕಾರ್ಯಾಚರಣೆಗೊಳ್ಳಲಿವೆ. ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಇರುವುದಿಲ್ಲಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.