ಹೈಕಮಾಂಡ್‌ ನಿರ್ಧಾರಕ್ಕೆ ತಲೆ ಬಾಗಲೇಬೇಕು – ಡಿಸಿಎಂ ಸ್ಥಾನದ ಬಗ್ಗೆ ಡಿಕೆಶಿ ಹೇಳಿಕೆ..

ಹೈಕಮಾಂಡ್‌ ನಿರ್ಧಾರಕ್ಕೆ ತಲೆ ಬಾಗಲೇಬೇಕು – ಡಿಸಿಎಂ ಸ್ಥಾನದ ಬಗ್ಗೆ ಡಿಕೆಶಿ ಹೇಳಿಕೆ..

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಕೊನೆಗೂ ಬಗೆಹರಿದಿದೆ. ಕಳೆದ ನಾಲ್ಕೈದು ದಿನಗಳಿಂದ ದೆಹಲಿ ನಡೆಯುತ್ತಿದ್ದ ಸಿಎಂ ಕಗ್ಗಂಟನ್ನು ಹೈಕಮಾಂಡ್​ ಬಿಡಿಸುವಲ್ಲಿ ಯಶಸ್ವಿಯಾಗಿದೆ. ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಡಿ.ಕೆ ಶಿವಕುಮಾರ್‌, ಡಿಸಿಎಂ ಆಗಲು ಒಪ್ಪಿಗೆ ಸೂಚಿಸಿದ್ದು, ತಮಗೆ ಉಪ ಮುಖ್ಯಮಂತ್ರಿ ಸ್ಥಾನ ದೊರೆತಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹೈಕಮಾಂಡ್‌ ಈ ನಿರ್ಧಾರ ಕೈಗೊಂಡಿದೆ. ನಾನು ಈ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಆಯ್ಕೆಗೆ 5 ದಿನ, ಸಂಪುಟ ರಚನೆಗೆ ಇನ್ನೆಷ್ಟು ದಿನ?

ʼಕರ್ನಾಟಕದ ಜನತೆಗೆ ಬದ್ಧರಾಗಿರಬೇಕು. ಪಾರ್ಲಿಮೆಂಟ್ ಎಲೆಕ್ಷನ್ ಇನ್ನೇನು ಹತ್ತಿರದಲ್ಲೇ ಇದೆ. ಹೀಗಾಗಿ ನಾವು ಬೇರೇನೂ ಮಾಡಲು ಸಾಧ್ಯವಿಲ್ಲ. ನಾನು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗಿದೆ. ಪಕ್ಷದಲ್ಲಿ ಹೆಚ್ಚಿನವರು ನಿರ್ಧರಿಸಿದಂತೆ ನಡೆದುಕೊಳ್ಳಲೇ ಬೇಕಾಗಿದೆʼ ಎಂದು ಹೇಳಿದರು.

ʼಪಕ್ಷದ ಹಿರಿಯರು ಮಾಡಿರುವ ಸೂತ್ರವನ್ನು ಈಗ ಒಪ್ಪಿಕೊಳ್ಳಲೇಬೇಕು. ಕೆಲವೊಮ್ಮೆ ಅವರು ಏನು ಹೇಳುತ್ತಾರೋ ಅದನ್ನು ನಾವು ಕೇಳಲೇ ಬೇಕಾಗುತ್ತದೆ. ಅಂತಿಮವಾಗಿ ನಮಗೆ ದೊಡ್ಡ ಜವಾಬ್ದಾರಿಯಿದೆ. ನಾವು ಕರ್ನಾಟಕದ ಜನತೆಗೆ ನೀಡಿರುವ ಭರವಸೆಯಂತೆ ನಡೆದುಕೊಳ್ಳಬೇಕಾಗುತ್ತದೆʼ ಎಂದು ನುಡಿದಿದ್ದಾರೆ.

suddiyaana