ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರವೆಸಗಿದ ಪಾಪಿಗಳು..! – ಒಬ್ಬನ ಬಂಧನ, ಮತ್ತೊಬ್ಬ ದುರುಳ ಪರಾರಿ

ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರವೆಸಗಿದ ಪಾಪಿಗಳು..! – ಒಬ್ಬನ ಬಂಧನ, ಮತ್ತೊಬ್ಬ ದುರುಳ ಪರಾರಿ

ಲಕ್ನೋದಲ್ಲಿ ನಾಗರೀಕ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅನಾಚಾರ, ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳನ್ನು ಕೇಳಿಬರುತ್ತಿರುವ ಈ ಸಮಯದಲ್ಲಿ ಬಾಲಕರಿಗೂ ರಕ್ಷಣೆಯಿಲ್ಲವೇ ಅನ್ನೋ ಅನುಮಾನ ಮೂಡಿದೆ. ಯಾಕೆಂದರೆ, ಗಾಜಿಯಾಬಾದ್‌ನಲ್ಲಿ 13 ವರ್ಷದ ಬಾಲಕನ ಮೇಲೆ ಕಾಮಪಿಪಾಸುಗಳು ಅತ್ಯಾಚಾರ ಎಸಗಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ – ಸಾವಿನ ಸಂಖ್ಯೆ 11ಕ್ಕೆ ಏರಿಕೆ  

ಆ ಬಾಲಕ ಇನ್ನೂ ಅಪ್ರಾಪ್ತ. ಕೇವಲ 13 ವರ್ಷ ವಯಸ್ಸಷ್ಟೇ. ಆ ಪುಟ್ಟ ಬಾಲಕನ ಮೇಲೆ ದುರುಳರು ಅನಾಚಾರವೆಸಗಿರುವುದು ನಿಜಕ್ಕೂ ನಾಚಿಕೆಗೇಡು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಒಬ್ಬನನ್ನು ಬಂಧಿಸಿದ್ದಾರೆ. ಆರೋಪಿ, ಇನ್ನೊಬ್ಬ ವ್ಯಕ್ತಿಯ ಜೊತೆ ತನ್ನೊಂದಿಗೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 13 ವರ್ಷದ ಬಾಲಕನನ್ನು ಅಂಗಡಿಯ ಮಹಡಿ ಮೇಲೆ ಕರೆದೊಯ್ದಿದ್ದಾನೆ. ಅಲ್ಲಿ ಇಬ್ಬರೂ ಸೇರಿ ಬಾಲಕನ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅದರಲ್ಲಿ ಓರ್ವನನ್ನು ಬಂಧಿಸಲಾಗಿದೆ. ಮತ್ತೋರ್ವನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ. ಈ ಸಂಬಂಧ ಚುನೂ ಮತ್ತು ಮುನೂ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿ ಚುನೂನನ್ನು ಬಂಧಿಸಲಾಗಿದೆ. ಜುಲೈ 7 ರಂದು ಈ ಘಟನೆ ನಡೆದಿದೆ. ಅಂದು ಮಧ್ಯಾಹ್ನದ ವೇಳೆಗೆ ಉಳಿದ ಕೆಲಸಗಾರರು ಅಂಗಡಿಯ ಒಳಗಿದ್ದರು. ಈ ವೇಳೆ ಆರೋಪಿಗಳಾದ ಚುನೂ ಮತ್ತು ಮುನೂ ಬಾಲಕನನ್ನು ಮಹಡಿಗೆ ಕರೆದೊಯ್ದಿದ್ದಾರೆ. ಬಳಿಕ ಆತನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

suddiyaana