ರಾಜ್ಯದಲ್ಲಿ ಬರ ಬರೆ! – ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ ಬೆಲೆ!

ರಾಜ್ಯದಲ್ಲಿ ಬರ ಬರೆ! – ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ ಬೆಲೆ!

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಜಲಾಶಯಗಳು ಭರ್ತಿಯಾಗದೇ ನೀರಿನ ಅಭಾವ ಕಾಡುತ್ತಿದೆ. ಕೃಷಿ ಚಟುವಟಿಕೆಗಳಿಗೆ ಸರಿಯಾದ ಪ್ರಮಾಣ ನೀರು ಸಿಗದೇ ಬೆಳೆದ ಬೆಳೆ ನೆಲಕಚ್ಚಿವೆ. ರಾಜ್ಯದಲ್ಲಿ ಬರಗಾಲ ಉಂಟಾದ ಪರಿಣಾಮ ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳು ಬೆಲೆ ಗಗನಕ್ಕೇರಿದೆ. ಇದೀಗ ಈರುಳ್ಳಿಯ ಬೆಲೆ ದಿನದಿಂದ ದಿನ್ಕಕೆ ಹೆಚ್ಚಳವಾಗುತ್ತಿದ್ದು, ಗ್ರಾಹಕರ ಕಣ್ಣಲ್ಲಿ ನೀರು ಬರಿಸುತ್ತಿದೆ.

ಅನಾವೃಷ್ಟಿಯಿಂದ ಈ ಬಾರಿ ರಾಜ್ಯದಲ್ಲಿ ಈರುಳ್ಳಿ ಕಡಿಮೆ ಪ್ರಮಾಣದಲ್ಲಿ ಬೆಳೆಯಲಾಗಿದೆ. ಪಕ್ಕದ ಮಹಾರಾಷ್ಟ್ರ ಹಾಗೂ ಗುಜರಾತ್‌ನಿಂದಲೂ ಈ ವೇಳೆಗೆ ಈರುಳ್ಳಿ ಪೂರೈಕೆ ಆಗದಿರುವುದರಿಂದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಕಳೆದೆರಡು ವಾರಗಳಿಂದ ಈರುಳ್ಳಿ ಬೆಲೆ ಭಾರಿ ಏರಿಕೆ ಕಂಡಿದೆ. 35 ರಿಂದ 40 ರೂ.ಗಳ ನಡುವೆ ಇದ್ದ ಈರುಳ್ಳಿಯ ಸಗಟು ಬೆಲೆ ಗುರುವಾರದ ವೇಳೆಗೆ ಕೆಜಿಗೆ 65 ರೂಪಾಯಿಗೆ ಹೆಚ್ಚಳವಾಗಿದೆ. ಇದು ಹೀಗೆ ಮುಂದುವರಿದರೆ ಈರುಳ್ಳಿ ಬೆಲೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:  ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? – ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಇನ್ನು ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಳಪೆ, ಸಾಧಾರಣ ಗುಣಮಟ್ಟದ ಈರುಳ್ಳಿಯೂ ಕ್ವಿಂಟಲ್‌ಗೆ ₹3800-4200 ನಂತೆ ಮಾರಾಟವಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದ (NAFED) ಮೂಲಕ ಬೆಲೆ ನಿಯಂತ್ರಣದ ಉದ್ದೇಶಕ್ಕಾಗಿ ಬೆಂಗಳೂರಿಗೆ ಪೂರೈಸುತ್ತಿರುವ ಈರುಳ್ಳಿಯೂ ಕ್ವಿಂಟಲ್‌ಗೆ ₹4000- 4600 ನಂತೆ ಮಾರಾಟವಾಗಿ ದಾಖಲೆ ಬರೆದಿದೆ. ಅತ್ಯುತ್ತಮ ಎಂದರೆ ಮಹಾರಾಷ್ಟ್ರದ ಈರುಳ್ಳಿ ₹5000 – ₹6000 ವರೆಗೆ ಮಾರಾಟ ಮಾಡಲಾಗುತ್ತಿದೆ.

ಸಾಗಾಟ ವೆಚ್ಚ, ಕೂಲಿ, ಮತ್ತಿತರ ಕಾರಣದಿಂದ ಚಿಲ್ಲರೆ ಮಾರು ಪ್ರವ ಕಟ್ಟೆಗೆ ತಲುಪುವ ಹೊತ್ತಿಗೆ ಈರುಳ್ಳಿ ಬೆಲೆ ಮತ್ತಷ್ಟು ಹೆಚ್ಚಾಗುತ್ತಿದೆ. ನಗರದ ಕೆ.ಆರ್.ಮಾರುಕಟ್ಟೆ, ಶೇಷಾದ್ರಿ ಪುರ, ಮಲ್ಲೇಶ್ವರ, ಜಯನಗರ ಚಿಲ್ಲರೆ ಮಾರುಕಟ್ಟೆಗಳಲ್ಲಿ ಕೆಜಿಗೆ 250- 265ವರೆಗೆ ಮಾರಾಟವಾಗುತ್ತಿದೆ. ಹಾಪ್‌ಕಾಮ್, ಮಾಲ್‌ಗಳಲ್ಲಿ ಹೆಚ್ಚು ಬೆಲೆ ಇದೆ. ಕಳೆದ ಹದಿನೈದು ದಿನಗಳ ಹಿಂದೆ ₹100 ರೂ.ಗೆ 3 -4 ಕೆಜಿ ಲಭ್ಯ ವಾಗುತ್ತಿತ್ತು. ಆದರೆ, ಈಗ ಒಂದೂವರೆ ಎರಡು ಕೆಜಿ ಮಾತ್ರ ಸಿಗುತ್ತಿದೆ.

Shwetha M