ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು 1‌ ದಿನ ಮಾತ್ರ ಅವಕಾಶ! – ಯಾವ ಯಾವ ದಾಖಲೆಗಳು ಬೇಕು?

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು 1‌ ದಿನ ಮಾತ್ರ ಅವಕಾಶ! – ಯಾವ ಯಾವ ದಾಖಲೆಗಳು ಬೇಕು?

ಬೆಂಗಳೂರು: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿರುವವರಿಗೆ ಗುಡ್‌ ನ್ಯೂಸ್‌ ಒಂದಿದೆ. ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಒಂದು ದಿನದ ಅವಕಾಶ ನೀಡಿದೆ.

ನಾಗರಿಕರು ಡಿಸೆಂಬರ್ 3ರಂದು ಹೊಸ ರೇಶನ್ ಕಾರ್ಡ್ ಅರ್ಜಿ‌ ಸಲ್ಲಿಸಬಹುದಾಗಿದೆ. ಹೊಸ ರೇಷನ್ ಕಾರ್ಡ್‌ಗೆ ಅರ್ಜಿಸಲು ಕೇವಲ ಒಂದು ದಿನ ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 3 ರಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಅರ್ಜಿ ಸಲ್ಲಿಕೆ‌ಯಾಗುವ ಹಿನ್ನೆಲೆ ಕಡಿಮೆ ಸಮಯಾವಕಾಶ ಕೊಟ್ಟಿರುವ ಆಹಾರ ಇಲಾಖೆ. ಎಲ್ಲರಿಗೂ ಭಾನುವಾರ ಅರ್ಜಿ ಹಿನ್ನೆಲೆ ಅಂದೇ ಹೊಸ ರೇಷನ್ ಮಾಡಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಕಳೆದ 6 ತಿಂಗಳಿಂದ ಪಡಿತರ ತೆಗೆದುಕೊಳ್ಳದ ರೇಷನ್‌ ಕಾರ್ಡ್‌ಗಳು ರದ್ದು!

ಕರ್ನಾಟಕ ಒನ್‌ ಹಾಗೂ ಗ್ರಾಮ ಒನ್‌ಗಳಲ್ಲಿ ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಗರ ಪ್ರದೇಶಗಳಲ್ಲಿರುವ ಕರ್ನಾಟಕ ಒನ್‌ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ಗ್ರಾಮ ಒನ್‌ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇವುಗಳನ್ನು ಹೊರತುಪಡಿಸಿ ಬೇರೆ ಇನ್ಯಾವುದೇ ಆನ್‌ಲೈನ್‌ ಸೆಂಟರ್‌ಗಳಲ್ಲಿಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹೊಸ ರೇಷನ್ಕಾರ್ಡ್ಗೆ ಅರ್ಜಿಸಲ್ಲಿಸಲು ಬೇಕಾದ ದಾಖಲಾತಿಗಳು ಏನು?

  • ವಾಸವಿರುವ ನಗರಸಭೆ/ಪುರಸಭೆ/ನಗರ ಪಾಲಿಕೆಯ ವಾರ್ಡ್ ಸಂಖ್ಯೆ, ಗ್ರಾಮದ ಹೆಸರು.
  • ಮನೆಯ ವಿದ್ಯುತ್ ಬಿಲ್‌
  • ನಿವಾಸದ ಪೂರ್ಣ ವಿಳಾಸ (ಕಡ್ಡಾಯವಾಗಿ ಅಂಚೆಪಿನ್ ಕೋಡ್‌ನೊಂದಿಗೆ).
  • ಸ್ವಂತ ಮನೆಯಾಗಿದ್ದಲ್ಲಿ ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು.
  • ಕುಟುಂಬದ ಸದಸ್ಯರ ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ)
  • ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ.ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ

Shwetha M