ದೀಪಾವಳಿಗೆ ರಾಸಾಯನಿಕ ಪಟಾಕಿ ಬ್ಯಾನ್‌! – ಇನ್ನುಮುಂದೆ ಈ ಟೈಮ್‌ನಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಕಾಶ!

ದೀಪಾವಳಿಗೆ ರಾಸಾಯನಿಕ ಪಟಾಕಿ ಬ್ಯಾನ್‌! – ಇನ್ನುಮುಂದೆ ಈ ಟೈಮ್‌ನಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಕಾಶ!

ಬೆಂಗಳೂರು: ದೀಪಾವಳಿಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಈಗಾಗಲೇ ರಾಜ್ಯದ ಜನರು ದೀಪಾವಳಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಹೊಸ ಬಟ್ಟೆ ಪೂಜಾ ಸಾಮಾಗ್ರಿ, ಪಟಾಕಿಗಳನ್ನು ಖರೀದಿಸುತ್ತಿದ್ದಾರೆ. ಆದರೆ ದೀಪಾವಳಿಗೂ ಮುನ್ನವೇ ಪಟಾಕಿ ದುರಂತಗಳು ಸಂಭವಿಸುತ್ತಿದ್ದು, ಈಗಾಗಲೇ ಹತ್ತಾರು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಸರ್ಕಾರ ಕಟ್ಟು ನಿಟ್ಟಿನ ನಿಯಮ ಜಾರಿಗೆ ತರಲು ಮುಂದಾಗಿದೆ. ಇದೀಗ ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಬಿಟ್ಟು ಉಳಿದ ಪಟಾಕಿ ಮಾರಾಟ ಹಾಗೂ ಬಳಕೆಗೆ ನಿರ್ಬಂಧ ವಿಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ.

ಪಟಾಕಿ ಸಿಡಿಸುವ ಕುರಿತು ಸುಪ್ರೀಂಕೋರ್ಟ್‌ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಇತರೆ ಪಟಾಕಿ ಮಾರಾಟ ದಾಸ್ತಾನು, ಬಳಕೆ ನಿಷೇಧ ಮಾಡಲಾಗಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಈ ಸಂಬಂಧ ಕ್ರಮಕೈಗೊಳ್ಳಬೇಕೆಂದು ಮಂಡಳಿ ತಿಳಿಸಿದೆ

ಇದನ್ನೂ ಓದಿ: ನವರಾತ್ರಿಯ 7ನೇ ದಿನ ಕಾಳರಾತ್ರಿಯ ಆರಾಧನೆ – ಅತ್ಯಂತ ಶಕ್ತಿಶಾಲಿ ದೇವತೆಯ ಪೂಜಾ ವಿಧಿವಿಧಾನಗಳ ವಿವರ ಇಲ್ಲಿದೆ.

ಪಟಾಕಿ ಸಿಡಿಸಲು ಸಮಯ ದಿನಾಂಕ ನಿಗದಿ!

ಪಟಾಕಿ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮ ನಡೆಸಬೇಕು. ಸ್ಥಳೀಯ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸಬಾರದು. ದೀಪಾವಳಿ ಸಂದರ್ಭದಲ್ಲಿ (ನ.11ರಿಂದ 15ರವರೆಗೆ) ಪಟಾಕಿ ಸಿಡಿಸಲು ಸಮಯ ನಿಗದಿ ಮಾಡಲಾಗಿದೆ. ರಾತ್ರಿ 8ರಿಂದ 11 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ ಎಂದು ಮಂಡಳಿ ಹೇಳಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ಸೂಚನೆ ಹೀಗಿವೆ..

  • ಸುಪ್ರೀಂಕೋರ್ಟ್‌ ಆದೇಶಗಳನ್ನು ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಅಧೀನ ಅಧಿಕಾರಿಗಳ ಗಮನಕ್ಕೆ ತಂದು ಆದೇಶ ಪಾಲಿಸಲು ಸೂಚಿಸಬೇಕು.
  • ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆಸಕ್ತ ನಾಗರಿಕರು ಹಾಗೂ ಸ್ಥಳೀಯ ಸರಧಿಕಾಧಿರೇಧಿತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ರಚಿಸಬೇಕು.
  • ಕಾರ‍್ಯಪಡೆಯು ಎಲ್ಲಾಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗೂ ಅಲ್ಲಿಹಸಿರು ಪಟಾಕಿಯಲ್ಲದೆ ಇನ್ಯಾಧಿವುಧಿದಾಧಿದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಇದ್ದಲ್ಲಿಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ವಿಧಿರುದ್ಧ ಕ್ರಿಮಿನಲ್‌ ಮೊಕದ್ದಮೆಯನ್ನು ಹೂಡಬೇಕು.
  • ಎಲ್ಲಾಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್‌ ಮೇಲೆ ಹಸಿರು ಪಟಾಕಿಯ ಚಿಹ್ನೆ, ಕ್ಯು ಆರ್‌ ಕೋಡ್‌ ಇರುವುದನ್ನು ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತಪಡಿಸಿಕೊಳ್ಳಬೇಕು.
  • ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್‌ಗಳನ್ನು ರ್ಯಾಂಡಮ್‌ ಆಗಿ ಸಂಗ್ರಹಿಸಿ, ನಿಗದಿತ ವಿಧಿ ವಿಧಾನಗಳ ಮೂಲಕ ಶಬ್ದ ಮಟ್ಟವನ್ನು ಮಾಪನ ಮಾಡಬೇಕು. ನಿಗದಿತ ಗುಣಮಾಪನಗಳಿಗೆ ಸರಿಹೊಂದಿದ್ದಲ್ಲಿ ಅವುಗಳನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು.
  • ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗು ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.
  • ನ್ಯಾಯಾಲಯದ ಆದೇಶದಂತೆ ಎಎಕ್ಯೂಎಂ ಮತ್ತು ಶಬ್ದ ಪ್ರಮಾಣ ನಿರ್ವಹಣೆಗೆ ಕ್ರಮ ವಹಿಸಬೇಕು. ಮಾದರಿ ಮತ್ತು ಗುಣಮಾಪನಗಳ ವಿಶ್ಲೇಷಣೆ ಹಾಗೂ ಶಬ್ದ ಪ್ರಮಾಣ ನಿರ್ವಹಣೆ ವಿಷಯದಲ್ಲಿ ಎಸ್‌ ಒ ಡಾ. ರಾಘವೇಂದ್ರ ಅಧಿವರನ್ನು 9880046189 ಸಂಪರ್ಕಿಸಲು ಕೋರಲಾಗಿದೆ.
  • ದೀಪಾವಳಿ ಸಮಯದಲ್ಲಿಉತ್ಪಾದನೆಯಾಗುವ ಘನ ತ್ಯಾಜ್ಯ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು. ಹೊರ ರಾಜ್ಯಗಳಿಂದ ನಿಷೇಧಿತ ಪಟಾಕಿ ಸಾಗಾಟ ಮಾಡುತ್ತಿದ್ದಲ್ಲಿಅವುಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಳ್ಳಬೇಕು.

Shwetha M