‘ಅತಂತ್ರ ಫಲಿತಾಂಶವಲ್ಲ.. ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ’ – ಕೋಡಿಹಳ್ಳಿ ಶ್ರೀಗಳ ಭವಿಷ್ಯ ನಿಜವಾಗ್ತಿದ್ಯಾ?

‘ಅತಂತ್ರ ಫಲಿತಾಂಶವಲ್ಲ.. ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ’ – ಕೋಡಿಹಳ್ಳಿ ಶ್ರೀಗಳ ಭವಿಷ್ಯ ನಿಜವಾಗ್ತಿದ್ಯಾ?

ಚುನಾವಣಾ ಫಲಿತಾಂಶ ಏನಾಗುತ್ತೆ.. ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ.. ಯಾರು ಸಿಎಂ ಆಗಬಹುದು ಎಂದು ಇಡೀ ದೇಶವೇ ಕರ್ನಾಟಕ ಚುನಾವಣೆ ಫಲಿತಾಂಶವನ್ನ ಕುತೂಹಲದಿಂದ ಎದುರು ನೋಡುತ್ತಿದೆ. ಇಂಥಾ ಟೈಮಲ್ಲೇ ರಾಜಕೀಯ ಭವಿಷ್ಯದ ಬಗ್ಗೆ ಕೋಡಿಹಳ್ಳಿ ಶ್ರೀಗಳು ನೀಡಿದ್ದ ಹೇಳಿಕೆ ಮತ್ತೆ ಮುನ್ನಲೆಗೆ ಬಂದಿದೆ.

ನಾಳೆ ಬೆಳಗಾಗ್ತಿದ್ದಂತೆ ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ, ಎರಡು ತಿಂಗಳ ಹಿಂದೆ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನೀಡಿದ್ದ ಹೇಳಿಕೆ ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಸಮ್ಮಿಶ್ರ ಸರ್ಕಾರ ಅಧಿಕಾರ‌ ಮಾಡಲ್ಲ ಎಂದು ಜನವರಿಯಲ್ಲಿ ಶ್ರೀಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು. ಜತೆಗೆ, ಎರಡ್ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ ಎಂದೂ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ : ಅತಂತ್ರ ಫಲಿತಾಂಶ ಬಂದ್ರೆ ಕಾಂಗ್ರೆಸ್ ಗೆ ಕುಮಾರಸ್ವಾಮಿ ಬೆಂಬಲ ಕೊಡ್ತಾರೆ – ಸತೀಶ್ ಜಾರಕಿಹೊಳಿ ವಿಶ್ವಾಸ!

ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಚುನಾವಣೆವರೆಗೂ ಪಕ್ಷಾಂತರಗಳು ಇರುತ್ತವೆ. ಪಕ್ಷಗಳು ಕೂಡಿ ಹೋಗುವುದು ಕಷ್ಟ. ಚುನಾವಣೆವರೆಗೂ ಏನು ಹೇಳುವುದಕ್ಕೆ ಆಗುವುದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ‌‌‌. ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಫೆಬ್ರುವರಿಯಲ್ಲಿ ಕೋಡಿಮಠ ಶ್ರೀ ಹೇಳಿದ್ದರು. ರಾಜಕೀಯ ಬೆಳವಣಿಗೆಗಳ ಬಗ್ಗೆ ಭವಿಷ್ಯ ನುಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೂ ಪ್ರತಿಕ್ರಿಯಿಸಿದ್ದರು.

suddiyaana