ಐಪಿಎಲ್ ಆರಂಭಕ್ಕೆ ಇನ್ನು ಮೂರೇ ದಿನ -ಆರ್‌ಸಿಬಿ ಪಂದ್ಯ ಯಾವಾಗ ? ಎಲ್ಲಿ?

ಐಪಿಎಲ್ ಆರಂಭಕ್ಕೆ ಇನ್ನು ಮೂರೇ ದಿನ -ಆರ್‌ಸಿಬಿ ಪಂದ್ಯ ಯಾವಾಗ ? ಎಲ್ಲಿ?

2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಉಳಿದಿರುವುದು ಕೇವಲ ಮೂರೇ ದಿನಗಳು ಮಾತ್ರ. ಪಂದ್ಯಗಳನ್ನು ನೋಡಲು, ತಮಗಿಷ್ಟವಾದ ಆಟಗಾರರನ್ನು ನೋಡಲು ಅಭಿಮಾನಿಗಳಂತೂ ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಮಾರ್ಚ್ 31 ರಂದು ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದ್ದು, ಅಭಿಮಾನಿಗಳ ಪಾಲಿನ ಐಪಿಎಲ್ ಹಬ್ಬ ಶುರುವಾಗಲಿದೆ. ಅದರಲ್ಲೂ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಮೊದಲ ಪಂದ್ಯ ಆಡಲಿದೆ.

ಇದನ್ನೂ ಓದಿ: ಐಪಿಎಲ್ ಬಿಡ್ಡಿಂಗ್ – ಇತಿಹಾಸ ಬರೆದ ಸ್ಯಾಮ್ ಕರನ್, ದಾಖಲೆಯ 18.50 ಕೋಟಿ ರೂಗೆ ಪಂಜಾಬ್ ಕಿಂಗ್ಸ್ ಪಾಲು

ವಿಶೇಷ ಎಂದರೆ ಈ ಬಾರಿ ಆರ್‌ಸಿಬಿ ತಂದಡ ತನ್ನ ಮೊದಲ ಪಂದ್ಯವನ್ನು ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಬೆಂಗಳೂರು ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ. ಎರಡನೇ ಪಂದ್ಯ ಏಪ್ರಿಲ್ 6 ರಂದು ಆಯೋಜಿಸಲಾಗಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೋಲ್ಕತ್ತಾದಲ್ಲಿ ಆಡಲಿದೆ ಮೂರನೇ ಪಂದ್ಯ ಏಪ್ರಿಲ್ 10ರಂದು ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ನಾಲ್ಕನೇ ಪಂದ್ಯ ಏಪ್ರಿಲ್ 15ರಂದು ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೆಹಲಿ ಕ್ಯಾಪಿಟಲ್ಸ್ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ಐದನೇ ಪಂದ್ಯ ಏಪ್ರಿಲ್ 17ರಂದು ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ಅಂದು ಅಭಿಮಾನಿಗಳಿಗೆ ಹಬ್ಬ ಅಂತಾನೇ ಹೇಳಬಹುದು. ಆರನೇ ಪಂದ್ಯ ಏಪ್ರಿಲ್ 20 ರಂದು ನಡೆಯಲಿದೆ. ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಏಳನೇ ಪಂದ್ಯ ಏಪ್ರಿಲ್ 23ರಂದು ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್ ರಾಯಲ್ಸ್ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ಎಂಟನೇ ಪಂದ್ಯ ಏಪ್ರಿಲ್ 26ರಂದು ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಬೆಂಗಳೂರಲ್ಲಿ ನಡೆಯಲಿದೆ. ಒಂಬತ್ತನೇ ಪಂದ್ಯ ಮೇ 1ರಂದು ನಡೆಯಲಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ಲಕ್ನೋದಲ್ಲಿ ನಡೆಯಲಿದೆ. ಹತ್ತನೇ ಪಂದ್ಯ ಮೇ 6ರಂದು ನಡೆಯಲಿದೆ. ದೆಹಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯ ದೆಹಲಿಯಲ್ಲಿ ನಡೆಯಲಿದೆ. ಹನ್ನೊಂದನೇ ಪಂದ್ಯ ಮೇ 9ರಂದು, ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈಯಲ್ಲಿ ನಡೆಯಲಿದೆ. ಹನ್ನೆರಡನೇ ಪಂದ್ಯ ಮೇ 14ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಜೈಪುರದಲ್ಲಿ ನಡೆಯಲಿದೆ. ಹದಿಮೂರನೇ ಪಂದ್ಯ ಮೇ 18ರಂದು ಸನ್‌ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಹೈದರಾಬಾದ್ ನಡೆಯಲಿದೆ. ಹಾಗೂ ಕೊನೆಯ ಪಂದ್ಯವನ್ನು ಮೇ 21, 2023 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಬೆಂಗಳೂರಿನಲ್ಲಿ ಆಡಲಿದೆ.

ಈ ಬಾರಿಯ ಆರ್‌ಸಿಬಿ ತಂಡ ಹೀಗಿದೆ.

ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಮೈಕೆಲ್ ಬ್ರೇಸ್ವೆಲ್, ಮನೋಜ್ ಭಾಂಡಗೆ, ಸೋನು ಯಾದವ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ.

suddiyaana