ಭಾರತ ಮತ್ತು ಪಾಕ್ ನಡುವೆ ಯುದ್ಧ ಶುರು?- ಭಾರತದ ದಾಳಿಗೆ ಕಂಗೆಟ್ಟ ಶತ್ರುದೇಶ

ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಶುರುವಾದಂತೆ ಕಾಣುತ್ತಿದೆ. ಪಾಕಿಸ್ತಾನದ ವಿರುದ್ದ ಭಾರತ 2ನೇ ಬಾರಿ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಭಾರತದ ಗಡಿಯಿಂದ 24 ಕಿ.ಮೀ ದೂರದಲ್ಲಿರುವ ಲಾಹೋರ್‌ನತ್ತ ಭಾರತದ ಕ್ಷಿಪಣಿಗಳು ಧಾವಿಸಿವೆ. ಉಗ್ರ ನೆಲೆಯನ್ನು ಗುರಿಯಾಗಿಸಿ ಈ ದಾಳಿ ನಡೆಯುತ್ತಿದೆ
ಪಾಕಿಸ್ತಾನವೂ ಪ್ರತಿ ದಾಳಿ ನಡೆಸಿ ಭಾರತೀಯ ಸೇನೆಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಿ ಸಂಪೂರ್ಣವಾಗಿ ವಿಫಲವಾಗಿದೆ. ಪಾಕ್ ಸೇನೆಯು ಭಾರತದ ವಾಯು ನೆಲೆಗಳ ಮೇಲೆ ವಾಯು ದಾಳಿ ನಡೆಸಿದೆ. ಭಾರತದ ಆಪರೇಷನ್ ಸಿಂಧೂರ್ಗೆ ಪಾಕಿಸ್ತಾನ ಪತರಗುಟ್ಟಿದೆ. ಪಾಕಿಸ್ತಾನದ ಬಂದರು ನಗರಿ ಎಂದೇ ಖ್ಯಾತಿ ಪಡೆದಿರುವ ಕರಾಚಿ ಹಾಗೂ ಇಸ್ಲಾಮಾಬಾದ್ ಮೇಲೂ ಭಾರತ ದಾಳಿ ಮಾಡಿದೆ. ಇದರಿಂದ ಪಾಕಿಸ್ತಾನ ಕಂಗೆಟ್ಟು ಹೋಗಿದೆ.
ಉಧಮ್‌ಪುರ, ಸಾಂಬಾ, ಜಮ್ಮು, ಅಖ್ನೂರ್, ನಾಗ್ರೋಟಾ ಮತ್ತು ಪಠಾಣ್‌ಕೋಟ್ ಪ್ರದೇಶಗಳಲ್ಲಿ ಭಾರತೀಯ ಸೇನೆಯ ವಾಯು ರಕ್ಷಣಾ ಘಟಕಗಳು ನಡೆಸಿದ ದೊಡ್ಡ ಪ್ರಮಾಣದ ಪ್ರತಿ-ಡ್ರೋನ್ ಕಾರ್ಯಾಚರಣೆಯಲ್ಲಿ 50 ಕ್ಕೂ ಹೆಚ್ಚು ಡ್ರೋನ್‌ಗಳನ್ನು ಯಶಸ್ವಿಯಾಗಿ ತಟಸ್ಥಗೊಳಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಎಲ್-70 ಬಂದೂಕುಗಳು, ಜು-23 ಎಂಎಂ, ಶಿಲ್ಕಾ ವ್ಯವಸ್ಥೆಗಳು ಮತ್ತು ಇತರ ಸುಧಾರಿತ ಯುಎಎಸ್ ಶಸ್ತ್ರಾಸ್ತ್ರಗಳ ಬಳಕೆ ಸೇರಿದ್ದು, ವೈಮಾನಿಕ ಬೆದರಿಕೆಗಳನ್ನು ಎದುರಿಸಲು ಸೈನ್ಯದ ದೃಢವಾದ ಸಾಮರ್ಥ್ಯವನ್ನು ಪ್ರದರ್ಶಿಸಿತು.
ಭಾರತದ ವಾಯು ಸೇನೆ ಜೊತೆಗೆ ನೌಕಾಪಡೆಯು ಪಾಕಿಸ್ತಾನದ ವಿರುದ್ಧ ದಾಳಿಗೆ ಇಳಿದಿದೆ. ವಾಯು ಸೇನೆ ಹಾಗೂ ನೌಕಾಪಡೆಯು ಎರಡೂ ಜಂಟಿಯಾಗಿ ಅಟ್ಯಾಕ್ ಮಾಡುತ್ತಿವೆ. ವಿರೋಧಿ ರಾಷ್ಟ್ರದ ಪ್ರಮುಖ ನಗರಗಳಾದ ಇಸ್ಲಾಮಾಬಾದ್, ಬಂದರು ನಗರಿ ಕರಾಚಿ ಮೇಲೆ ಭಾರತ ಅಟ್ಯಾಕ್ ಮಾಡಿದೆ. ದಾಳಿ ಮುಂದಿರೆದಿದ್ದು ಪಾಕಿಸ್ತಾನದ ಮೇಲೆ ನಿರಂತರ ಕ್ಷಿಪಣಿ ದಾಳಿ ನಡೆಸಲಾಗುತ್ತಿದೆ.
ಭಾರತದ ಗಡಿಯಿಂದ 24 ಕಿ.ಮೀ ದೂರದಲ್ಲಿರುವ ಲಾಹೋರ್‌ನತ್ತ ಭಾರತದ ಕ್ಷಿಪಣಿಗಳು ಧಾವಿಸಿವೆ. ಜತೆಗೆ ಸಿಯಾಲ್‌ಕೋಟ್ ಮೇಲೂ ದಾಳಿ ನಡೆಸಿದೆ. ಉಗ್ರ ನೆಲೆಯನ್ನು ಗುರಿಯಾಗಿಸಿ ಈ ದಾಳಿ ನಡೆಯುತ್ತಿದೆ. ಈ ಮೂಲಕ ಭಾರತದ ಸೇನೆಯು ಪಾಕಿಸ್ತಾನಕ್ಕೆ ಖಡಕ್ ಉತ್ತರ ನೀಡಲು ಮುಂದಾಗಿದೆ. ಲಾಹೋರ್‌ನಲ್ಲಿ ಬೀಡು ಬಿಟ್ಟಿರುವ ಲಷ್ಕರ್ ಎ ತಯ್ಯಬ ಮುಖ್ಯಸ್ಥ ಉಗ್ರಗಾಮಿ ಹಫೀಸ್ ಸಯೀದ್ ಮನೆಯನ್ನು ಭಾರತೀಯ ಸೇನೆ ಟಾರ್ಗೆಟ್ ಮಾಡಿದೆ. ಅವನ ಮನೆಯನ್ನು ಧ್ವಂಸಗೊಳಿಸುವ ಎಲ್ಲಾ ಮುನ್ಸೂಚನೆಯೂ ಇದೆ.