ಹೋಟೆಲ್, ಪಬ್, ರೆಸ್ಟೋರೆಂಟ್ ಗಳಲ್ಲಿ ಧೂಮಪಾನ ಸ್ಥಳ ತೆರವಿಗೆ ಆದೇಶ

ಹೋಟೆಲ್, ಪಬ್, ರೆಸ್ಟೋರೆಂಟ್ ಗಳಲ್ಲಿ ಧೂಮಪಾನ ಸ್ಥಳ ತೆರವಿಗೆ ಆದೇಶ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್, ಕ್ಲಬ್ ಗಳಲ್ಲಿ ಧೂಮಪಾನ ಸ್ಥಳವನ್ನು ನಿಗದಿಪಡಿಸಿವೆ. ಇದೀಗ ಅಕ್ರಮವಾಗಿ ನಿಗದಿಪಡಿಸಿರುವ ಧೂಮಪಾನ ಸ್ಥಳಗಳು ಅಥವಾ ಕೊಠಡಿಗಳನ್ನು ತೆರವುಗೊಳಿಸಬೇಕು ಅಂತಾ ಬೆಂಗಳೂರು ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್‌ ಆಯುಕ್ತರು ಈ ಕ್ರಮ ಕೈಗೊಂಡಿದ್ದಾರೆ. ಧೂಮಪಾನ ನಿಗದಿ ಸ್ಥಳಗಳಲ್ಲಿ ಆಹಾರ, ನೀರು ಪಾನೀಯ, ತಂಬಾಕು ಉತ್ಪನ್ನ ಒದಗಿಸುವುದನ್ನು ನಿಷೇಧಿಸಲಾಗಿದೆ. ಸೂಚನಾ ಫಲಕ ಅಳವಡಿಸಿ ಜಾಗೃತಿ ಮೂಡಿಸಬೇಕು. ಅಲ್ಲದೇ ನಿಗದಿತ ಧೂಮಪಾನ ಸ್ಥಳಗಳಲ್ಲಿ ಆಹಾರ ಮತ್ತು ಪಾನೀಯಗಳ ಸೇವನೆ ಲಭ್ಯವಾಗದಂತೆ ನೋಡಿಕೊಳ್ಳಬೇಕು. ಎನ್ಒಸಿಯಲ್ಲಿ ತಿಳಿಸಿದ ಮಾನದಂಡಗಳಂತೆ ಸ್ಥಳ ನಿಗದಿ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮೇಲೆ ತಿಳಿಸಿದ ಮಾನದಂಡಗಳು ಸರಿಯಾಗಿ ಪಾಲನೆ ಆಗುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ನಿಯಮಿತವಾಗಿ ತಪಾಸಣೆ ನಡೆಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

Shwetha M