ಆಸ್ಕರ್ 2023 – ‘RRR’, ‘ದಿ ಎಲಿಫೆಂಟ್ ವಿಸ್ಪರ್ಸ್’ ತಂಡಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಆಸ್ಕರ್ 2023 – ‘RRR’, ‘ದಿ ಎಲಿಫೆಂಟ್ ವಿಸ್ಪರ್ಸ್’ ತಂಡಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಭಾರತ ಸಿನಿಮಾ ಇತಿಹಾಸದಲ್ಲೇ  RRR ಸಿನಿಮಾ ಹೊಸ ದಾಖಲೆಯನ್ನು  ಬರೆದಿದೆ. ಈ ಸಿನಿಮಾದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಘೋಷಣೆಯಾಗುತ್ತಿದ್ದಂತೆ ದೇಶದಾದ್ಯಂತ ಚಿತ್ರ ಪ್ರೇಮಿಗಳು, ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಅಲ್ಲದೇ ಚಿತ್ರ ತಂಡಕ್ಕೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ: ಇತಿಹಾಸ ಬರೆದ ನಾಟು ನಾಟು – ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಯ ಗರಿ

ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ನಾಟು ನಾಟು  ಹಾಡು ಅತ್ಯುತ್ತಮ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದ್ದರೆ, ಡಾಕ್ಯುಮೆಂಟರಿ ವಿಭಾಗದಲ್ಲಿ ಕಾರ್ತಿಕಿ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್ ’ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಎರಡೂ ತಂಡಕ್ಕೂ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.  ‘ನಾಟು ನಾಟು’ ಹಾಡಿನ ಜನಪ್ರಿಯತೆ ಜಾಗತಿಕವಾಗಿದೆ. ಮುಂದಿನ ವರ್ಷಗಳಲ್ಲಿಯೂ ಇದು ನೆನಪಿನಲ್ಲಿ ಉಳಿಯುವಂತೆ ಮಾಡಿದೆ. ಅಭಿನಂದನೆಗಳು ಎಂ.ಎಂ ಕೀರವಾಣಿ ಅಂತಾ ಟ್ವೀಟ್ ಮಾಡಿದ್ದಾರೆ.

ಇನ್ನು ಬೆಸ್ಟ್ ಕಿರು ಸಾಕ್ಷ್ಯಚಿತ್ರ ವಿಭಾಗದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಗೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಈ ತಂಡವನ್ನು ಕೂಡ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದರು. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು.

ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆಯಲ್ಲಿ ಭಾಗಿಯಾಗಿದ್ದರು.

suddiyaana