ಇನ್ನು ಮುಂದೆ ಒಟಿಟಿಯಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಕಡ್ಡಾಯ – ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ?

ಇನ್ನು ಮುಂದೆ ಒಟಿಟಿಯಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಕಡ್ಡಾಯ – ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ?

ನವದೆಹಲಿ: ಸಿನಿಮಾ ಥಿಯೇಟರ್‌ಗಳಲ್ಲಿ ಹಾಗೂ ದೂರದರ್ಶನ ಕಾರ್ಯಕ್ರಮಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆಯನ್ನು ಈ ಹಿಂದೆಯಿಂದಲೂ ಪ್ರದರ್ಶಿಸಲಾಗುತ್ತಿದೆ. ಆದರೆ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಇದನ್ನು ಕಡ್ಡಾಯಗೊಳಿಸಲಾಗಿರಲಿಲ್ಲ. ಇದೀಗ ಕೇಂದ್ರ ಆರೋಗ್ಯ ಸಚಿವಾಲಯ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲೂ ಇದನ್ನು ಕಡ್ಡಾಯಗೊಳಿಸಿದೆ.

ಇದನ್ನೂ ಓದಿ:172 ಬಾರಿ ದೇವಾಲಯದ ಆಭರಣ ಅಡವಿಟ್ಟ ಅರ್ಚಕ – ಕೊನೆಗೆ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

ಇನ್ನು ಮುಂದೆ ಒಟಿಟಿ ಪ್ಲಾಟ್‌ ಫಾರ್ಮ್‌ ಗಳಲ್ಲಿ ಕೂಡ ತಂಬಾಕು ವಿರೋಧಿ ಎಚ್ಚರಿಕೆ ನೀಡುವುದನ್ನು ಕೇಂದ್ರ ಆರೋಗ್ಯ ಸಚಿವಾಲಯ   ಕಡ್ಡಾಯಗೊಳಿಸಿದೆ. ಒಂದು ಈ ನಿಯಮವನ್ನು ಪ್ಲಾಟ್‌ಫಾರ್ಮ್‌ಗಳು ಅನುಸರಿಸದೇ ಹೋದರೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ.

ಯಾವುದೇ ಕಾರ್ಯಕ್ರಮಗಳು ಪ್ರಸಾರವಾಗುವ ಮುನ್ನ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕನಿಷ್ಟ 20 ಸೆಕೆಂಡುಗಳವರೆಗೆ ಆಡಿಯೋ ಅಥವಾ ದೃಶ್ಯದ ರೂಪದಲ್ಲಿ ಪ್ರದರ್ಶಿಸಬೇಕು. ತಂಬಾಕು ಉತ್ಪನ್ನಗಳು ಅಥವಾ ಅವುಗಳ ಬಳಕೆಯನ್ನು ಪ್ರದರ್ಶಿಸುವಾಗ ಒಟಿಟಿ ಪ್ಲಾಟ್‌ಫಾರ್ಮ್‌ಗಳು ತಂಬಾಕು ವಿರೋಧಿ ಆರೋಗ್ಯದ ಎಚ್ಚರಿಕೆಯನ್ನು ಪರದೆಯ ಕೆಳಭಾಗದಲ್ಲಿ ಪ್ರದರ್ಶಿಸಬೇಕು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಸಾರವಾಗುವ ವೆಬ್‌ಸೀರೀಸ್, ಚಲನಚಿತ್ರಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಧೂಮಪಾನವನ್ನು ವ್ಯಾಪಕವಾಗಿ ಪ್ರದರ್ಶಿಸಲಾಗುತ್ತಿದೆ. ಇದು ಸಿಗರೇಟ್ ಹಾಗೂ ಇತರ ತಂಬಾಕು ಉತ್ಪನ್ನಗಳ ಕಾಯಿದೆ 2003ರ ಉಲ್ಲಂಘನೆಯಾಗಿದೆ. ಇದೀಗ ಒಟಿಟಿ ಪ್ಲಾಟ್‌ಫಾರ್ಮ್‌ಗಳು ಹೆಚ್ಚು ಜನಪ್ರಿಯವಾಗಿದ್ದು, ದೇಶದಲ್ಲಿ ಯುವಕರು ಹಾಗೂ ಮಕ್ಕಳಿಗೆ ತಂಬಾಕು ಬಳಕೆಯನ್ನು ಉತ್ತೇಜಿಸುವಲ್ಲಿ ಇದು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

suddiyaana