ಕಾಂಗ್ರೆಸ್ ಗೆ ಬಜರಂಗದಳ ಠಕ್ಕರ್ – ನಾಳೆ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ

ಕಾಂಗ್ರೆಸ್ ಗೆ ಬಜರಂಗದಳ ಠಕ್ಕರ್ – ನಾಳೆ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 7 ದಿನಗಳು ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಮತದಾರರ ಮನಗೆಲ್ಲೋಕೆ ರಾಜಕೀಯ ಪಕ್ಷಗಳು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ. ಮಂಗಳವಾರ (ಮೇ. 2) ಕಾಂಗ್ರೆಸ್ ಬಜರಂಗದಳವನ್ನು ನಿಷೇಧಿಸುವ ನಿರ್ಧಾರವನ್ನು ಪ್ರಣಾಳಿಕೆ ಹೇಳಿಕೊಂಡಿತ್ತು. ಇದಕ್ಕೆ ಈಗ ರಾಜ್ಯದಾದ್ಯಂತ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಮುಂದಾಗಿವೆ.

ಇದನ್ನೂ ಓದಿ: ಐಟಿ ಅಧಿಕಾರಿಗಳ ದಾಳಿ – ಮನೆ ಅಂಗಳದ ಮರದಲ್ಲಿ ಸಿಕ್ಕಿದ್ದು 1 ಕೋಟಿ ರೂಪಾಯಿ..!

ಬಜರಂಗದಳ ಹಾಗೂ ಹಿಂದೂ ಸಂಘಟನೆಗಳು ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸಲು ಬಜರಂಗದಳ ನಿರ್ಧರಿಸಿದೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ.

ಈ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಬಜರಂಗದಳ ನಾಳೆ (ಮೇ. 4) ಸಂಜೆ 7 ಗಂಟೆಗೆ ರಾಜ್ಯದಾದ್ಯಂತ ಸಾಮೂಹಿಕ ಹನುಮಾನ್ ಚಾಲಿಸಾ ಪಠಣವನ್ನು ಆಯೋಜಿಸಿದೆ. ಇದು ಧರ್ಮಕ್ಕೆ ಸಂಕಟವೆರಗಿರುವ ಸಮಯ. ಒಟ್ಟಾಗಿ ನಿಲ್ಲುವುದೊಂದೇ ಪರಿಹಾರ. ನಮ್ಮೆಲ್ಲ ಭೇದಗಳನ್ನು ಒತ್ತಟ್ಟಿಗಿಟ್ಟು ಧರ್ಮರಕ್ಷಣೆಗೆ ಜೊತೆಯಾಗೋಣ, ಕೈ ಜೋಡಿಸೋಣ ಎಂದು ಬರೆದುಕೊಂಡಿದ್ದಾರೆ.

suddiyaana