ಪ್ರಾಯಶ್ಚಿತ ಪಾದಯಾತ್ರೆ.. ಗ್ರಾಮಗಳಲ್ಲೇ ವಾಸ್ತವ್ಯ – ಸೋಲಿನ ಬಳಿಕ ಜನರತ್ತ ವೈಎಸ್​ವಿ ದತ್ತ!

ಪ್ರಾಯಶ್ಚಿತ ಪಾದಯಾತ್ರೆ.. ಗ್ರಾಮಗಳಲ್ಲೇ ವಾಸ್ತವ್ಯ – ಸೋಲಿನ ಬಳಿಕ ಜನರತ್ತ ವೈಎಸ್​ವಿ ದತ್ತ!

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರ ಭಾರೀ ಹಲ್ ಚಲ್ ಸೃಷ್ಟಿಸಿತ್ತು. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತ ಕೊನೆಗೆ ಕಾಂಗ್ರೆಸ್ ಟಿಕೆಟ್ ಸಿಗದೆ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ರು. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೈಎಸ್​ವಿ ದತ್ತ ಸೋಲನುಭವಿಸಿದ್ರು. ಇದೀಗ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಲು ಸೋಲಿನ ಪ್ರಾಯಶ್ಚಿತ್ತ ಪಾದಯಾತ್ರೆಗೆ ದತ್ತ ಮುಂದಾಗಿದ್ದಾರೆ.

ಇದನ್ನೂ ಓದಿ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಔಟ್ – ಪ್ರಹ್ಲಾದ್ ಜೋಶಿಯಿಂದ ಸುಳಿವು!

ವಿಧಾನಸಭಾ ಚುನಾವಣೆಗೂ ಮುನ್ನವೇ ಮಾಜಿ ಶಾಸಕ ವೈಎಸ್​ವಿ ದತ್ತ ಇದು ನನ್ನ ಕೊನೆಯ ಎಲೆಕ್ಷನ್ ಎಂದಿದ್ದರು. ದತ್ತ ಇಂದಿಗೂ ತಮ್ಮ ಹೇಳಿಕೆಗೆ ಬದ್ಧರಾಗಿದ್ದು, ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಕಡೂರಿಗರು ನನ್ನ ರಾಜಕೀಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ನಾನಾಗಲೀ ಅಥವಾ ನಮ್ಮ ಕುಟುಂಬವಾಗಲಿ ಈ ಕ್ಷೇತ್ರವನ್ನು ಮರೆಯಲು ಸಾಧ್ಯವಿಲ್ಲ. ಕಡೂರು ಕ್ಷೇತ್ರದ ಜನತೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ನನ್ನ ಕೊನೆಯುಸಿರು ಇರುವವರೆಗೂ ಎಲ್ಲರಲ್ಲೂ ಒಂದಾಗಿ ನನ್ನ ನೆಲದಲ್ಲಿಯೇ ಮಣ್ಣಾಗುತ್ತೇನೆ. ನನ್ನ ಹಲವಾರು ತಪ್ಪುಗಳಿಗೆ ಜನರು ಸರಿಯಾದ ಶಿಕ್ಷೆ ನೀಡಿದ್ದಾರೆ. ತಪ್ಪು ಮಾಡಿದ ನಾನು ಅದಕ್ಕಾಗಿ ಪ್ರಾಯಶ್ಚಿತ್ತ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದೇನೆ ಎಂದಿದ್ದಾರೆ.

ಜೂನ್ 24 ನನ್ನ ಜನ್ಮದಿನ. ಅಂದಿನಿಂದ ಕ್ಷೇತ್ರದ ಪ್ರತೀ ಹಳ್ಳಿಗೆ ಪಾದಯಾತ್ರೆಯ ಮೂಲಕ ತೆರಳಿ ನನ್ನ ತಪ್ಪುಗಳಿಗಾಗಿ ಕ್ಷಮೆ ಕೋರುತ್ತೇನೆ. ಪಾದಯಾತ್ರೆಯಲ್ಲಿ ಹಳ್ಳಿಗಳಲ್ಲೇ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಈ ಸಂಕಲ್ಪ ಯಾವುದೇ ಚುನಾವಣಾ ದೃಷ್ಟಿಯಿಂದ ಮಾಡಿಲ್ಲ. ಕೇವಲ ನನ್ನ ಆತ್ಮಾವಲೋಕನ ಮಾತ್ರ. ಎಲ್ಲ ವಿವರಗಳನ್ನು ತಮಗೆ ತಿಳಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

suddiyaana