ಭಾರತದ ವಿರುದ್ಧ ಮಂಡಿಯೂರಿದ ಪಾಕ್ – ಭಾರತದೊಂದಿಗೆ ಶಾಂತಿಯುತ ಮಾತುಕತೆಗೆ ಸಿದ್ಧ ಎಂದ ಪಾಕ್ ಪ್ರಧಾನಿ

ಭಾರತದ ವಿರುದ್ಧ ಯುದ್ಧ ಮಾಡೋ ಉತ್ಸಾಹದಲ್ಲಿದ್ದ ಪಾಕ್ ಈಗ ಭಾರತದ ವಿರುದ್ಧ ಮಂಡಿಯೂರಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಪಾಕ್ ತಣ್ಣಗಾಗಿದ್ದು, ಭಾರತದೊಂದಿಗೆ ಶಾಂತಿಯುತ ಮಾತುಕತೆಗೆ ಸಿದ್ಧ ಎಂದು ಹೇಳಿದೆ.
ಪಾಕಿಸ್ತಾನದ ಪಂಜಾಬ್‌ನಲ್ಲಿರುವ ಕಮ್ರಾ ವಾಯುನೆಲೆಗೆ ಗುರುವಾರ ಭೇಟಿ ನೀಡಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್, ನಮ್ಮ ದೇಶ ಭಾರತದೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಸಿದ್ಧವಿದೆ ಎಂದು ಹೇಳಿದ್ದಾರೆ. ಆದರೆ, ಈ ಮಾತುಕತೆಯಲ್ಲಿ ಕಾಶ್ಮೀರ ಸಮಸ್ಯೆ ಪರಿಹರಿಸುವ ವಿಚಾರ ಕೂಡ ಇರಬೇಕೆಂದು ಷರತ್ತು ಹಾಕಿದ್ದಾರೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ್ದ ಉಗ್ರರು ನೇಪಾಳಿ ಪ್ರಜೆ ಸೇರಿದಂತೆ 26 ನಾಗರಿಕರ ಬಲಿ ಪಡೆದಿದ್ದರು. ಈ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಇದರ ಬೆನ್ನಲ್ಲೇ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಹಲವಾರು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು.