ಪಾಕ್‌ನಲ್ಲಿ ಭಾರಿ ಮಳೆ – 37ಕ್ಕೂ ಅಧಿಕ ಮಂದಿ ಸಾವು

ಪಾಕ್‌ನಲ್ಲಿ ಭಾರಿ ಮಳೆ – 37ಕ್ಕೂ ಅಧಿಕ ಮಂದಿ ಸಾವು

ಪಾಪಿ ಪಾಕಿಸ್ತಾನಕ್ಕೆ ಶಾಕ್‌ ಮೇಲೆ ಶಾಕ್‌ ಎದುರಾಗಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರಿತಪಿಸುತ್ತಿರುವ ಪಾಕ್‌ಗೆ ಈಗ ಪ್ರಕೃತಿಯೇ ಶಾಕ್‌ ನೀಡಿದೆ. ಕಳೆದ ಎರಡು ದಿನಗಳಿಂದ ಪಾಕ್‌ನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿತ ಪ್ರಕರಣದಲ್ಲಿ 37ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮತ್ತೆ ಕೇಂದ್ರದ ವಿರುದ್ಧ ಅನ್ನದಾತರ ಕಹಳೆ – ಮಾರ್ಚ್ 6 ರಂದು ದೆಹಲಿ ಚಲೋ ಪುನರಾರಂಭ, ಮಾರ್ಚ್ 10 ಕ್ಕೆ ‘ರೈಲ್ ರೋಕೋ’ಗೆ ಕರೆ,

ಪಾಕ್‌ನಲ್ಲಿ ಕಳೆದ ಗುರುವಾರ ರಾತ್ರಿಯಿಂದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬಜೌರ್, ಸ್ವಾತ್, ಲೋವರ್ ದಿರ್, ಮಲಕಾಂಡ್, ಖೈಬರ್, ಪೇಶಾವರ್, ವಜೀರಿಸ್ತಾನ್ ಮತ್ತು ಲಕ್ಕಿ ಮಾರ್ವತ್ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಸುರಿದ ನಿರಂತರ ಮಳೆ ಸುರಿಯುತ್ತಿದ್ದು, ಮಳೆಯ ರೌದ್ರಾವತಾರಕ್ಕೆ ಕೆಲವೆಡೆ ಮನೆ ಹಾಗೂ ಭೂಕುಸಿತ ಉಂಟಾಗಿದೆ. ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.  ಹಲವಾರು ಜನ ಮಳೆ ಸಂಬಂಧಿತ ಅನಾಹುತಗಳಿಂದ ಗಾಯಗೊಂಡಿದ್ದಾರೆ. ಮೃತರಲ್ಲಿ ಮಕ್ಕಳ ಸಂಖ್ಯೆಯೇ ಹೆಚ್ಚಾಗಿದೆ. ಸೂಕ್ತ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಳೆ ಮತ್ತು ಹಿಮದಿಂದ ಉಂಟಾದ ಭೂಕುಸಿತದಿಂದಾಗಿ ಪಾಕಿಸ್ತಾನ ಹಾಗೂ ಚೀನಾದೊಂದಿಗೆ ಸಂಪರ್ಕಿಸುವ ಕಾರಕೋರಂ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶಗಳ ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ಅಧಿಕಾರಿಗಳು ಎಚ್ಚರಿಕೆಯನ್ನು ಸಹ ನೀಡಿದ್ದಾರೆ.

Shwetha M