ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟ! – ಸಿಎಂ, ಡಿಸಿಎಂ ವಿರುದ್ಧ ಅಸಮಧಾನ ಹೊರಹಾಕಿದ ಪರಮೇಶ್ವರ್
ರಾಜ್ಯ ಕಾಂಗ್ರೆಸ್‌ನಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ಆಂತರಿಕೆ ಬೇಗುದಿ ಇದೀಗ ಮತ್ತೊಮ್ಮೆ ಸ್ಫೋಟಗೊಂಡಿದೆ. ಪಕ್ಷದಲ್ಲಿ ಕೆಲ ನಿರ್ಧಾರಗಳ ಬಗ್ಗೆ ಏಕಮುಖ ತೀರ್ಮಾನ ಕೈಗೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಗೃಹ ಸಚಿವ ಪರಮೇಶ್ವರ್ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್ – ವಿಡಿಯೋ ಹಂಚಿದ್ದ ಇಬ್ಬರು ಅರೆಸ್ಟ್!
ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಬ್ಬರೇ ತೀರ್ಮಾನ ಕೈಗೊಳ್ಳುವ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಗೃಹ ಸಚಿವ ಡಾ ಜಿ ಪರಮೇಶ್ವರ್, ಅವರಿಬ್ಬರೇ ತೀರ್ಮಾನ ಮಾಡಿದ್ರೆ ಸರಿಯಲ್ಲ. ಪಕ್ಷದ ಹಿರಿಯ ನಾಯಕರ ಸಲಹೆ, ಅಭಿಪ್ರಾಯಗಳನ್ನೂ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ, ಯಾರು ಹಿರಿಯರು, ಅನುಭವಿ ನಾಯಕರು ಇದ್ದಾರೆ ಅವರ ಜೊತೆ ಚರ್ಚೆ ನಡೆಸುವುದು ಒಳ್ಳೆಯದು. ಪಕ್ಷದಲ್ಲಿ ಅನೇಕ ವರ್ಷ ದುಡಿದ ನಾಯಕರ ಸಲಹೆ ಪಡೆಯಬೇಕು. ಜಾತಿವಾರು, ಪ್ರಾದೇಶಿಕವಾರು, ಪಕ್ಷಕ್ಕೆ ದುಡಿದವರಿಗೆ ಸ್ಥಾನ ಕೊಡಬೇಕು ಎಂದು ತಿಳಿಸಿದ್ದಾರೆ.