ಸಂಸತ್ ಭವನದಲ್ಲಿ ಭಾರಿ ಭದ್ರತಾ ಲೋಪ – 6 ಆರೋಪಿಗಳ ಪೈಕಿ ಐವರನ್ನು ಬಂಧಿಸಿದ ಪೊಲೀಸರು
ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ವೇಳೆ ಸಂಸತ್‌ನಲ್ಲಿ ಬುಧವಾರ ಭದ್ರತಾ ಲೋಪ ಸಂಭವಿಸಿದೆ. ಇಬ್ಬರು ಸಂಸತ್ ಒಳಗೆ ಟಿಯರ್ ಗ್ಯಾಸ್ ದಾಳಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳ ಪೈಕಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಲೋಕಸಭಾ ಕಲಾಪ ವೇಳೆ ಭದ್ರತಾ ಲೋಪ – ವೀಕ್ಷಕರ ಪಾಸ್ ನಿಷೇಧಿಸಿದ ಸ್ಪೀಕರ್ ಓಂ ಬಿರ್ಲಾ
ಆರೋಪಿಗಳಾದ ಸಾಗರ್ ಶರ್ಮಾ ಮತ್ತು ಮನೋರಂಜನ್ ಮತ್ತು ಇತರೆ ಇಬ್ಬರನ್ನು ಗುಪ್ತಚರ ಅಧಿಕಾರಿಗಳ ಬುಧವಾರ ತಂಡ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ನಾಲ್ವರನ್ನು ಬಂಧಿಸಿದ ಬಳಿಕ ಪೊಲೀಸರು ಐದನೇ ವ್ಯಕ್ತಿಗಾಗಿ ಹುಡುಕಾಟ ನಡೆಸಿದರು. ನೀಲಂ ಮತ್ತು ಅನ್ಮೋಲ್ ಅವರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಚಿತ್ರೀಕರಿಸುತ್ತಿರುವುದು ಕಂಡುಬಂದಿದೆ. ಪೊಲೀಸರು ಮಹಿಳೆಯನ್ನು ಕರೆದುಕೊಂಡು ಹೋಗುವುದನ್ನು ಕಂಡ ಕೂಡಲೇ ಓಡಿ ಹೋಗಿದ್ದಾನೆ. ನಂತರ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದರು ಮತ್ತು ಅವರನ್ನು ಗುರುಗ್ರಾಮದಲ್ಲಿ ಬಂಧಿಸಲಾಯಿತು. ವ್ಯಕ್ತಿಯನ್ನು ಲಲಿತ್ ಝಾ ಎಂದು ಗುರುತಿಸಲಾಗಿದೆ. ಇನ್ನು ಸಂಸತ್ತಿನ ಭದ್ರತಾ ಲೋಪದ ಕುರಿತು ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಬುಧವಾರ ಸಮಿತಿಯನ್ನು ರಚಿಸಿದೆ.
ಘಟನೆಯ ವಿವರ?
ಬುಧವಾರ ಮಧ್ಯಾಹ್ನ 1 ಗಂಟೆ ಆಸುಪಾಸಿಗೆ ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಸ್ಪೀಕರ್ ಬಳಿ ಹಾರಿ ಬಂದು ಅಶ್ರುವಾಯು ಸಿಡಿಸಿದ್ದರು. ಬಳಿಕ ಇಬ್ಬರನ್ನು ಸಂಸದರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಪ್ರತಿಪಕ್ಷಗಳ ನಾಯಕರಿಂದ ರಾಷ್ಟ್ರಪತಿ ಭೇಟಿ ಸಂಸತ್ತಿನಲ್ಲಿ ಬುಧವಾರ ಸಂಭವಿಸಿದ ಭಾರೀ ಭದ್ರತಾ ಲೋಪಕ್ಕೆ ಸಂಬಂಧಿಸಿ ಪ್ರತಿಪಕ್ಷಗಳ ನಾಯಕರ ನಿಯೋಗವೊಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದೆ. ಈ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉಭಯ ಸದನಗಳಲ್ಲಿ ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಂಸತ್ತಿನ ಭದ್ರತೆಯ ಮರು ಪರಿಶೀಲನೆ ಕೋರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಗೃಹ ಸಚಿವಾಲಯಕ್ಕೆ ಪತ್ರ ಬರೆಯುವ ಸಾಧ್ಯತೆ ಇದೆ.