ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣ – ಸಂಸತ್ತಿನೆದುರು ಬೆಂಕಿ ಹಚ್ಚಿಕೊಳ್ಳಲು ಪ್ಲ್ಯಾನ್ ಮಾಡಿದ್ದ ಆರೋಪಿ ಸಾಗರ್!
ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ವೈಫಲ್ಯ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ಸಂಸತ್ ಒಳಗೆ ಟಿಯರ್ ಗ್ಯಾಸ್ ದಾಳಿ ನಡೆಸಿದ್ದರು ಆತಂಕದ ವಾತಾವರಣ ಸೃಷ್ಟಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿದೆ. ಆರೋಪಿಗಳ ವಿಚಾರಣೆ ವೇಳೆ ದಿನಕ್ಕೊಂದು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಬಂಧಿತ ಆರೋಪಿ ಸಾಗರ್ ಶರ್ಮಾ ತಾನು ಸಂಸತ್ತಿನ ಹೊರಗೆ ಬೆಂಕಿ ಹಚ್ಚಿಕೊಳ್ಳಲು ತೀರ್ಮಾನಿಸಿದ್ದೆ ಎಂದು ವಿಚಾರಣೆ ಹೇಳಿದ್ದಾರೆ.
ಇದನ್ನೂ ಓದಿ: ತಪ್ಪಾಗಿ ತಿಳಿದು ಮೂವರು ಒತ್ತೆಯಾಳುಗಳನ್ನೇ ಗುಂಡಿಕ್ಕಿ ಹತ್ಯೆಗೈದ ಇಸ್ರೇಲ್ ಸೇನೆ!
ಹೌದು, ದೆಹಲಿ ಪೊಲೀಸರ ವಿಚಾರಣೆ ವೇಳೆ ಸಾಗರ್ ತನ್ನನ್ನು ತಾನು ಸುಟ್ಟುಕೊಳ್ಳಲು ಬಯಸಿದ್ದೆ, ಆದರೆ ನಂತರ ಈ ಯೋಜನೆಯನ್ನು ಕೈಬಿಡಲಾಗಿತ್ತು ಎಂದು ಹೇಳಿದ್ದಾನೆ. ಜೆಲ್ ಒಂದನ್ನು ಆನ್ಲೈನ್ನಲ್ಲಿ ಆರ್ಡರ್ ಮಾಡಲು ಬಯಸಿದ್ದೆ ಈ ಜೆಲ್ ಅನ್ನು ದೇಹದ ಮೇಲೆ ಹಚ್ಚಿಕೊಳ್ಳುವ ಮೂಲಕ ಬೆಂಕಿಯಿಂದ ರಕ್ಷಣೆ ಪಡೆಯಬಹುದು, ಆದರೆ ಆನ್ಲೈನ್ ಹಣ ಪಾವತಿ ಸಾಧ್ಯವಾಗಿರಲಿಲ್ಲ. ಹೀಗಾಗಿ ಜೆಲ್ ಖರೀದಿಸಲಾಗಲಿಲ್ಲ, ನಂತರ ಸಂಸತ್ತಿನ ಹೊರಗೆ ಬೆಂಕಿ ಹಚ್ಚಿಕೊಳ್ಳುವ ಯೋಜನೆಯನ್ನು ಕೈಬಿಡಲಾಯಿತು ಎಂದು ಹೇಳಿದ್ದಾನೆ
ಆರೋಪಿಗಳು ಘಟನೆ ನಡೆಸಲು ಒಂದಲ್ಲ ಎರಡಲ್ಲ 7 ಹೊಗೆ ಕ್ಯಾನ್‌ಗಳೊಂದಿಗೆ ಆಗಮಿಸಿದ್ದರು. ಆರೋಪಿಗಳು ಗೂಗಲ್ ನಲ್ಲಿ ಸರ್ಚ್ ಮಾಡಿ ಸಂಸತ್ ಭವನದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದರು. ಸಂಸತ್ ಭದ್ರತೆಯ ಹಳೆಯ ವೀಡಿಯೋಗಳನ್ನೂ ಒಳಗೊಂಡ ವಿಡಿಯೋದಿಂದ ಸುತ್ತಮುತ್ತಲಿನ ಪ್ರದೇಶಗಳ ಬಗ್ಗೆ ಸಾಕಷ್ಟು ವಿಷಯಗಳು ತಿಳಿದುಬಂದವು. ಈ ಕಾರಣಕ್ಕಾಗಿಯೇ ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳೆಲ್ಲರೂ ಸಿಗ್ನಲ್ ಆ್ಯಪ್‌ನಲ್ಲಿ ಪರಸ್ಪರ ಮಾತನಾಡಿಕೊಳ್ಳುತ್ತಿದ್ದು, ಯಾರನ್ನೂ ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳಲ್ಲಿ ತಮ್ಮ ಪ್ರಭಾವವನ್ನು ಸಾಬೀತುಪಡಿಸುವುದೇ ಆರೋಪಿಗಳ ನಿಜವಾದ ಉದ್ದೇಶ ಎಂದು ಮೂಲಗಳು ತಿಳಿಸಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಸದನದ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್ ಪ್ರವೇಶಿಸುವ ಯೋಜನೆ ಸಿದ್ಧಪಡಿಸಲಾಗಿತ್ತು ಎಂದು ಹೇಳಲಾಗುತ್ತಿದೆ.