ಡಿ. 7 ರಿಂದ ಸಂಸತ್ ಚಳಿಗಾಲದ ಅಧಿವೇಶನ- ಹಣದುಬ್ಬರ, ಬೆಲೆ ಏರಿಕೆ ಚರ್ಚೆ ಸಾಧ್ಯತೆ

ಡಿ. 7 ರಿಂದ ಸಂಸತ್ ಚಳಿಗಾಲದ ಅಧಿವೇಶನ- ಹಣದುಬ್ಬರ, ಬೆಲೆ ಏರಿಕೆ ಚರ್ಚೆ ಸಾಧ್ಯತೆ

ನವದೆಹಲಿ: ಸಂಸತ್​ನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರ ವರೆಗೆ ಒಟ್ಟು 17 ಕಲಾಪ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಕುರಿತಾದ ಚರ್ಚೆಗಳನ್ನು ಅಮೃತ ಕಾಲವು ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಹು ನಿರೀಕ್ಷೆಯ ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಪಂಕಜ್ ತ್ರಿಪಾಠಿ

ಜಗದೀಪ್ ಧನ್​ಕರ್ ಅವರು ಉಪರಾಷ್ಟ್ರಪತಿಯಾದ ಬಳಿಕ ನಡೆಯುತ್ತಿರುವ ಮೊದಲ ಸಂಸತ್ ಅಧಿವೇಶನ ಇದಾಗಿದ್ದು, ಅವರು ಮೊದಲ ಬಾರಿಗೆ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅಧಿವೇಶನದ ಮೊದಲ ದಿನ ಸಂತಾಪ ಸೂಚಕ ಸಭೆ ನಡೆಯಲಿದ್ದು, ದಿನದ ಮಟ್ಟಿಗೆ ಕಲಾಪ ಮುಂದೂಡಿಕೆಯಾಗಲಿದೆ. ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಸೇರಿದಂತೆ ಕೆಲವು ಸಂಸದರು ಇತ್ತೀಚೆಗೆ ಅಸುನೀಗಿದ್ದಾರೆ.

ಈ ಅಧಿವೇಶನದಲ್ಲಿ ಮಂಡಿಸಬೇಕಾದ ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸಿದೆ. ಆದರೆ, ಪ್ರತಿಪಕ್ಷಗಳು ಮಸೂದೆಗಳ ಬಗ್ಗೆ ಚರ್ಚೆಗೆ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಇಷ್ಟೇ ಅಲ್ಲದೆ ಬೆಲೆ ಏರಿಕೆ, ಹಣದುಬ್ಬರ ನಿಯಂತ್ರಿಸುವಲ್ಲಿ ವಿಫಲ, ನಿರುದ್ಯೋಗ ಇತ್ಯಾದಿ ವಿಚಾರಗಳ ಬಗ್ಗೆ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

suddiyaana