ದೇಶಾದ್ಯಂತ ಯುಪಿಐ ಸೇವೆಯಲ್ಲಿ ವ್ಯತ್ಯಯ – PhonePe, Google Pay ಗ್ರಾಹಕರ ಸಂಕಷ್ಟ

ದೇಶಾದ್ಯಂತ ಯುಪಿಐ ಸೇವೆಯಲ್ಲಿ ವ್ಯತ್ಯಯ –  PhonePe, Google Pay ಗ್ರಾಹಕರ ಸಂಕಷ್ಟ

ಶನಿವಾರ ಬೆಳಗ್ಗೆಯಿಂದಲೇ ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ ಕಂಡು ಬಂದಿದ್ದು, ಬಳಕೆದಾರರು ಡಿಜಿಟಲ್ ವಹಿವಾಟು ನಡೆಸಲು ಪರದಾಡುತ್ತಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಯುಪಿಐ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ದೂರಿದ್ದಾರೆ.

ಯುಪಿಐ ಸೇವೆಗಳಲ್ಲಿ ಪ್ರಮುಖ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಬಳಕೆದಾರರು ಡಿಜಿಟಲ್ ವಹಿವಾಟು   ನಡೆಸಲು ಪರದಾಡುತ್ತಿದ್ದಾರೆ. ಈ ದಿಢೀರ್ ತೊಂದರೆಯಿಂದ ಯುಪಿಐ ಮೇಲೆ ಪರಿಣಾಮ ಬೀರಿದೆ. ಅನೇಕ ಬಳಕೆದಾರರು ಪಾವತಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.

ಇನ್ನು ಡೌನ್‌ಡೆಕ್ಟರ್ ವರದಿಗಳ ಪ್ರಕಾರ, ಮಧ್ಯಾಹ್ನದ ವೇಳೆಗೆ ಈ ಯುಪಿಐ ಸಮಸ್ಯೆಗಳ ಬಗ್ಗೆ ಸುಮಾರು 1,168 ದೂರುಗಳು ಬಂದಿವೆ. ಅವುಗಳಲ್ಲಿ, ಗೂಗಲ್ ಪೇ ಬಳಕೆದಾರರು 96 ಸಮಸ್ಯೆಗಳನ್ನು ವರದಿ ಮಾಡಿದ್ದಾರೆ, ಪೇಟಿಎಂ ಬಳಕೆದಾರರು 23 ಸಮಸ್ಯೆಗಳ ಬಗ್ಗೆ ದೂರಿದ್ದಾರೆ. ಯುಪಿಐ ಈ ಸಮಸ್ಯೆಯನ್ನು ಇನ್ನೂ ಪರಿಹರಿಸಿಲ್ಲ. ಕಳೆದ ಕೆಲವು ದಿನಗಳಿಂದ ಯುಪಿಐ ಈ ರೀತಿಯ ಸಮಸ್ಯೆ ಎದುರಿಸುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಕಾರಣವೇನು?

ಯುಪಿಐ ಸೇವೆಗಳಲ್ಲಿನ ವೈಫಲ್ಯದ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ತಜ್ಞರು ಸರ್ವರ್ ಓವರ್‌ಲೋಡ್‌ಗಳು, ನಿಗದಿತ ನಿರ್ವಹಣೆ ಅಥವಾ ಸಂಭಾವ್ಯ ಸೈಬರ್ ಭದ್ರತಾ ಸಮಸ್ಯೆಗಳು ಇರಬಹುದು ಎಂದು ಶಂಕಿಸಿದ್ದಾರೆ. ಈ ಯುಪಿಐ ಸ್ಥಗಿತವು ಹಲವಾರು ಹಣಕಾಸು ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ.

 

Kishor KV

Leave a Reply

Your email address will not be published. Required fields are marked *