ಹಾಸನ ಪೆನ್‌ಡ್ರೈವ್‌ ಕೇಸ್‌ – ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ವಿದೇಶಾಂಗ ಸಚಿವಾಲಯ

ಹಾಸನ ಪೆನ್‌ಡ್ರೈವ್‌ ಕೇಸ್‌ – ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ವಿದೇಶಾಂಗ ಸಚಿವಾಲಯ

ಹಾಸನ ಪೆನ್‌ಡ್ರೈವ್‌ ಕೇಸ್‌ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್‌ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ವಿದೇಶದಲ್ಲಿ ಕುಳಿತು ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ. ಇಂದು ಬರ್ತಾರೆ, ನಾಳೆ ಬರ್ತಾರೆ ಅಂತಾ ಎಸ್‌ಐಟಿ ಅಧಿಕಾರಿಗಳು ಕಾದಿದ್ದೇ ಆಯ್ತು.. ಆದ್ರೆ ಪ್ರಜ್ವಲ್‌ ಮಾತ್ರ ಬರುವಂತೆ ಕಾಣುತ್ತಿಲ್ಲ. ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣಗೆ ಈಗ ವಿದೇಶಾಂಗಸಚಿವಾಲಯ ಬಿಗ್‌ ಶಾಕ್‌ ಕೊಟ್ಟಿದೆ. ಫಾರಿನ್‌ನಲ್ಲಿರುವ ಪ್ರಜ್ವಲ್‌ಗೆ  ವಿದೇಶಾಂಗ ಸಚಿವಾಲಯ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ.

ಇದನ್ನೂ ಓದಿ: ಸೇಡು ತೀರಿಸಿಕೊಳ್ಳುತ್ತಾ RR? – SRHಗೆ ಚೆನ್ನೈ ಬೆಂಬಲ ಸಿಗುತ್ತಾ?

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಇದೀಗ ರಾಜ್ಯ ಸರ್ಕಾರದ ಮನವಿಗೆ ವಿದೇಶಾಂಗ ಸಚಿವಾಲಯ ಸ್ಪಂಧಿಸಿದ್ದು, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ಧತಿಗೆ ಕ್ರಮಕೈಗೊಳ್ಳುತ್ತಿದೆ. ಇದೀಗ ವಿದೇಶಾಂಗ ಸಚಿವಾಲಯ ಪ್ರಜ್ವಲ್​ಗೆ ಶೋಕಾಸ್ ನೋಟಿಸ್ ನೀಡಿದೆ. ಈ ನೋಟಿಸ್ ಮೂಲಕ ಪಾಸ್​ಪೋರ್ಟ್​ ರದ್ದುಗೊಳಿಸುವ ಬಗ್ಗೆ ಪ್ರಜ್ವಲ್​ಗೆ ಉತ್ತರ ಕೇಳಿದೆ. ಇದರಿಂದ ಪ್ರಜ್ವಲ್​ಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.

ಅಶ್ಲೀಲ ಪೆನ್​ಡ್ರೈವ್​ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿ ವಹಿಸಿದ್ದು, ಎಸ್​ಐಟಿ ಅಧಿಕಾರಿಗಳು ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದಾರೆ. ಆದ್ರೆ, ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಮಾತ್ರ ಇದುವರೆಗೂ ಪತ್ತೆಯಾಗಿಲ್ಲ. ಈಗಾಗಲೇ ಎಸ್​ಐಟಿ ಅಧಿಕಾರಿಗಳು ವಿಚಾರಣೆಗೆ ಬರುವಂತೆ ಪ್ರಜ್ವಲ್​​ಗೆ ನೋಟಿಸ್ ಜಾರಿ ಮಾಡಿದ್ದಾರೆ. ಆದ್ರೆ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್​ ವಿದೇಶದಲ್ಲಿದ್ದುಕೊಂಡೇ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಲು ಕೆಲ ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಆದರೆ ಕಾಲಾವಕಾಶ ಮುಗಿದರೂ ಸಹ ಪ್ರಜ್ವಲ್​ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ಕುಳಿತುಕೊಂಡಿದ್ದಾರೆ.

ಜರ್ಮನಿಯಿಂದ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಮಾಡುತ್ತಾರೆ. ಆದ್ರೆ, ಕೊನೆ ಕ್ಷಣದಲ್ಲಿ ಟಿಕೆಟ್​ ರದ್ದು ಮಾಡುತ್ತಿದ್ದಾರೆ. ಒಟ್ಟು ಮೂರು ಬಾರಿ ಟಿಕೆಟ್​ ಬುಕ್ ಮಾಡುವುದು ಬಳಿಕ ರದ್ದು ಮಾಡಿದ್ದಾರೆ. ಇದರೊಂದಿಗೆ ವಿದೇಶದಲ್ಲಿದ್ದುಕೊಂಡು ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾರೆ.

Shwetha M