ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಾಯ್ತು ನೀರಿನ ಸಮಸ್ಯೆ –  ಶೌಚ ಮಾಡಲು ಮಾಲ್‌ಗೆ ಹೋಗ್ತಿದ್ದಾರೆ ಜನ!

ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಾಯ್ತು ನೀರಿನ ಸಮಸ್ಯೆ –  ಶೌಚ ಮಾಡಲು ಮಾಲ್‌ಗೆ ಹೋಗ್ತಿದ್ದಾರೆ ಜನ!

ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆ ಉಂಟಾಗಿದ್ದು, ಬರದ ವಾತಾವರಣ ನಿರ್ಮಾಣವಾಗಿದೆ. ಇದರ ಬಿಸಿ ಸಿಲಿಕಾನ್‌ ಸಿಟಿ ಬೆಂಗಳೂರಿಗೂ ತಟ್ಟಿದೆ. ನಗರದಲ್ಲಿ ನೀರಿನ ಅಭಾವ ತಲೆದೋರಿದೆ.. ಕುಡಿಯೋಕೂ ನೀರಿಲ್ಲ.. ತೊಳೆಯೋಕೂ ನೀರಿಲ್ಲ ಅನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ಮಧ್ಯೆ ಜನರು ಶೌಚಾಲಯಗಳನ್ನು ಬಳಸಲು ಹತ್ತಿರದ ಮಾಲ್‌ಗಳಿಗೆ ಹೋಗುತ್ತಿದ್ದಾರೆ ಎಂಬ ವಿಚಾರವೊಂದು ಬಯಲಾಗಿದೆ.

ಇದನ್ನೂ ಓದಿ: ಗಿಲ್ ಶತಕವನ್ನು ಕಣ್ತುಂಬಿಕೊಂಡರೂ ತಂದೆಗೆ ಅಸಮಾಧಾನ – ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಮೇಲೆ ಬೇಜಾರು

ಸದ್ಯ ಬೆಂಗಳೂರಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನೀರಿಗಾಗಿ ಹಾಹಾಕಾರ ಎದ್ದಿದೆ. ಅದೆಷ್ಟರ ಮಟ್ಟಿಗೆ ಅಂದರೆ ಖುದ್ದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಟ್ಯಾಂಕರ್ ಮೂಲಕ ನೀರು ಹರಿಸಲಾಗುತ್ತಿದೆ. ಇಷ್ಟೊಂದು ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರಿನಲ್ಲಿ ಜನ ಪರದಾಡುತ್ತಿದ್ದಾರೆ. ಇದೀಗ ನಗರದಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ಮಧ್ಯೆ ಜನರು ಶೌಚಾಲಯಗಳನ್ನು ಬಳಸಲು ಹತ್ತಿರದ ಮಾಲ್‌ಗಳಿಗೆ ಹೋಗುತ್ತಿದ್ದಾರೆ ಎಂದು ನಗರದ ನಿವಾಸಿಯೊಬ್ಬರು ಹೇಳಿದ್ದಾರೆ. ಜನರು ಸ್ನಾನ ಮಾಡಲು ಜಿಮ್‌ಗಳಿಗೆ ಹೋಗುತ್ತಿದ್ದಾರೆ ಎಂದು ಪ್ರೆಸ್ಟೀಜ್ ಫಾಲ್ಕನ್ ಸಿಟಿಯ ಫ್ಲಾಟ್‌ನಲ್ಲಿ ವಾಸಿಸುತ್ತಿರುವ ನಿವಾಸಿಯೊಬ್ಬರು ಹೇಳಿದ್ದಾರೆ.

ಪ್ರೆಸ್ಟೀಜ್ ಫಾಲ್ಕನ್ ಸಿಟಿಯ ಜನರು 1 ಕೋಟಿ ರೂ. ಇಎಂಐ ಪಾವತಿಸುತ್ತಿದ್ದಾರೆ. ಆದರೆ ಶೌಚಾಲಯದಲ್ಲಿ ಫ್ಲಶ್ ಮಾಡಲು ಸಾಧ್ಯವಾಗುತ್ತಿಲ್ಲ. ಕಾರಣ ನೀರಿಲ್ಲ. ನಾವು ಎಲ್ಲಿಗೆ ಬಂದಿದ್ದೇವೆ? ಇದಕ್ಕೆ ನಿಮ್ಮ ದೀರ್ಘಾವಧಿಯ ಪರಿಹಾರವೇನು? ಸೂಕ್ತ ನೀರಿಲ್ಲದ ಫ್ಲಾಟ್​ಗಳ ಖರೀದಿಸುವುದನ್ನು ನಿಲ್ಲಿಸಿ ಎಂದು ನಿವಾಸಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ಗೆ ಮನವಿ ಮಾಡಿದ್ದಾರೆ.

ಹೆಚ್ಚಿನ ಬಾಡಿಗೆದಾರರು ಮನೆ ಖಾಲಿ ಮಾಡಿದ್ದರೆ, ಇತರರು ತಾತ್ಕಾಲಿಕ ವಸತಿಗಳಿಗೆ ತೆರಳಿದ್ದಾರೆ. ನೀರಿಲ್ಲದ ಪರಿಣಾಮ ಶೌಚಾಲಯಗಳು ಸ್ವಚ್ಚಗೊಳಿಸದಿರುವುದರಿಂದ ಗಬ್ಬು ವಾಸನೆ ಬರುತ್ತಿವೆ. ಹೀಗಾಗಿ ಜನರು ತಮ್ಮ ನಿತ್ಯಕರ್ಮಗಳನ್ನು ಮಾಡಲು ಹತ್ತಿರದ ಮಾಲ್‌ಗೆ ಹೋಗುತ್ತಿರುವುದು ಸಾಮಾನ್ಯವಾಗಿದೆ ಎಂದು ನಿವಾಸಿಯೊಬ್ಬರು ಪೋಸ್ಟ್ ಹಂಚಿಕೊಂಡಿದ್ದಾರೆ.

Shwetha M