ಸಿಲಿಂಡರ್ ದರದಲ್ಲಿ ಭಾರಿ ಏರಿಕೆ  – ಎಷ್ಟೆಷ್ಟು ಹೆಚ್ಚಳವಾಗಿದೆ ಗೊತ್ತಾ?

ಸಿಲಿಂಡರ್ ದರದಲ್ಲಿ ಭಾರಿ ಏರಿಕೆ  – ಎಷ್ಟೆಷ್ಟು ಹೆಚ್ಚಳವಾಗಿದೆ ಗೊತ್ತಾ?

ನವದೆಹಲಿ: ಎಲ್ ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ ಭಾರಿ ಏರಿಕೆಯಾಗಿದೆ. ಗೃಹಬಳಕೆಯ ಅಡುಗೆ ಅನಿಲ ಮತ್ತು ವಾಣಿಜ್ಯ ಸಿಲಿಂಡರ್‌ಗಳ ಬೆಲೆಗಳನ್ನು ಕ್ರಮವಾಗಿ ಸಿಲಿಂಡರ್‌ಗೆ 50 ಮತ್ತು 350.50 ರೂ. ಗಳಷ್ಟು ಹೆಚ್ಚಿಸಲಾಗಿದ್ದು, ಇದರಿಂದಾಗಿ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

ಇದನ್ನೂ ಓದಿ: ಶೇ.17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರದಿಂದ ಅಧಿಕೃತ ಆದೇಶ – ಯಾವಾಗ್ಲಿಂದ ಜಾರಿಯಾಗುತ್ತೆ ಗೊತ್ತಾ..?

ಪರಿಷ್ಕೃತ ದರಗಳ ಪ್ರಕಾರ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳು ದೆಹಲಿಯಲ್ಲಿ ಪ್ರತಿ ಯೂನಿಟ್‍ಗೆ 2,119.50 ರೂ. ಹಾಗೂ ಗೃಹ ಬಳಕೆಯ ಸಿಲಿಂಡರ್ ಬೆಲೆ ಪ್ರತಿ ಯೂನಿಟ್‍ಗೆ 1,103 ರೂ. ಆಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ 1,055.50 ರೂ. ಆಗಿದೆ.

ಈ ಎಲ್ಲಾ ದರಗಳು ಇಂದಿನಿಂದ ಜಾರಿಗೆ ಬರಲಿದೆ. ಕಳೆದ ಜನವರಿ 1 ರಂದು ಕೂಡ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಯೂನಿಟ್ ಗೆ 25 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ಎಲ್ ಪಿಜಿ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರಿಗೆ ಕೈ ಸುಡುವಂತೆ ಆಗಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಗೃಹಬಳಕೆಯ ಗ್ಯಾಸ್ ಬೆಲೆ 50 ರೂ., ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 350 ರೂ. ಏರಿಕೆಯಾಗಿದೆ. ಈಗ ಜನರು ಹೋಳಿಗೆ ಖಾದ್ಯಗಳನ್ನು ಹೇಗೆ ಮಾಡಬೇಕೆಂದು ಕೇಳುತ್ತಿದ್ದಾರೆ. ಈ ಲೂಟಿಯ ಆದೇಶಗಳು ಎಷ್ಟು ದಿನ ಮುಂದುವರಿಯುತ್ತದೆ?’ ಮೋದಿ ಸರ್ಕಾರದ ಅವಧಿಯಲ್ಲಿ ಅಧಿಕ ಹಣದುಬ್ಬರದಿಂದ ಜನರು ನಲುಗಿ ಹೋಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

suddiyaana