ಬಿಜೆಪಿ ವಿರುದ್ಧ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ಲ್ಯಾನ್ – ಜೂನ್ 12ರಂದು ನಾಯಕರ ಸಭೆ

ಬಿಜೆಪಿ ವಿರುದ್ಧ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ಲ್ಯಾನ್ – ಜೂನ್ 12ರಂದು ನಾಯಕರ ಸಭೆ

ಮೋದಿ ಅಲೆ ಹಿಮ್ಮೆಟ್ಟಿಸಬೇಕು.. ಬಿಜೆಪಿ ಅಶ್ವಮೇಧ ಕುದುರೆಗೆ ಕಡಿವಾಣ ಹಾಕಬೇಕು.. ಇದು 2024ರ ಲೋಕಸಭಾ ಚುನಾವಣೆಗೆ ವಿಪಕ್ಷಗಳಿಗಿರುವ ಸವಾಲು.. ಇದೇ ಕಾರಣಕ್ಕೆ ವಿಪಕ್ಷ ನಾಯಕರು ದೊಡ್ಡ ತಂತ್ರವನ್ನೇ ಹೂಡಿದ್ದಾರೆ.. ಬಿಹಾರ ಸಿಎಂ ನಿತೀಶ್ ಕುಮಾರ್ ಪಾಟ್ನಾದಲ್ಲಿ ಜೂನ್ 12ರಂದು ಎನ್​ಡಿಎಯೇತರ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.. ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಭರ್ಜರಿ ಪ್ಲ್ಯಾನ್ ನಡೆದಿದೆ.

ಇದನ್ನೂ ಓದಿ: ಗ್ಯಾರಂಟಿಗಳನ್ನು ಜಾರಿಗೊಳಿಸಲು ಬೃಹತ್ ಸಮಾವೇಶಕ್ಕೆ ಸಿದ್ಧತೆ – ಹೊಸ ಸಂದೇಶ ಸಾರಲು ಕಾಂಗ್ರೆಸ್ ಚಿಂತನೆ

ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ನಂತಹ ಪ್ರಮುಖ ವ್ಯಕ್ತಿಗಳೊಂದಿಗೆ ಸಭೆ ನಡೆಸಿದ್ದಾರೆ.. ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಸಂಜಯ್ ರಾವತ್, ಶರದ್ ಪವಾರ್, ಜಾರ್ಖಾಂಡ್ ಸಿಂಎ ಹೇಮಂತ್ ಸೋರೆನ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಸೇರಿದಂತೆ ಹಲವು ನಾಯಕರನ್ನ ಆಹ್ವಾನಿಸಲಾಗಿದ್ದು, ಬಹುತೇಕರು ಭಾಗವಹಿಸುವ ನಿರೀಕ್ಷೆ ಇದೆ.. ಸಭೆಯಲ್ಲಿ ಬಿಜೆಪಿ ವಿರುದ್ಧ ಎಲ್ಲಾ ಕ್ಷೇತ್ರಗಳಲ್ಲಿ ಒಮ್ಮತದ ಒಬ್ಬರೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸೇರಿದಂತೆ ಏನೆಲ್ಲಾ ಅಸ್ತ್ರಗಳನ್ನು ಬಳಸಬಹುದು ಎಂಬ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ..

 

suddiyaana