ರೈತರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ! – ಮಾರ್ಚ್‌ 13 ರಂದು ಖಾತೆಗೆ ಬೀಳಲಿದೆ 2000 ರೂ!

ರೈತರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ! – ಮಾರ್ಚ್‌ 13 ರಂದು ಖಾತೆಗೆ ಬೀಳಲಿದೆ 2000 ರೂ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan) 22ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಕೋಟ್ಯಂತರ ರೈತರಿಗೆ ಮಹತ್ವದ ಅಪ್‌ಡೇಟ್ ಸಿಕ್ಕಿದೆ. ಮಾರ್ಚ್ ಮೊದಲ ವಾರದಲ್ಲಿ ಹಣ ಬರಲಿದೆ ಎಂಬ ನಿರೀಕ್ಷೆಯಿತ್ತು. ಆದ್ರೆ ಮಾರ್ಚ್‌ ಮೊದಲ ವಾರ ಬಂದಿರಲಿಲ್ಲ. ಇದೀಗ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 22ನೇ ಕಂತಿನ ಹಣವನ್ನು ಬಿಡುಗಡೆ ದಿನಾಂಕವನ್ನು ನಿಗದಿಪಡಿಸಲಾಗಿದೆ. ಇಷ್ಟು ದಿನ ಈ ಕಂತಿಗಾಗಿ ಕಾಯುತ್ತಿದ್ದ ಅನ್ನದಾತರಿಗೆ ಇದರಿಂದ ನೆಮ್ಮದಿ ಸಿಕ್ಕಂತಾಗಿದೆ.

ಇದನ್ನೂ ಓದಿ: LPG ಗ್ಯಾಸ್ ಸಿಲಿಂಡರ್ ಬುಕಿಂಗ್​ಗೆ ಹೊಸ ರೂಲ್ಸ್!‌ –  ಇನ್ಮುಂದೆ LPG ಸಿಲಿಂಡರ್‌ ಸುಲಭವಾಗಿ ಸಿಗೋದು ಕಷ್ಟ!

22ನೇ ಕಂತಿನ ಹಣ ಯಾವಾಗ ಬರುತ್ತೆ ಅಂತ ಕಾಯುತ್ತಿದ್ದ ರೈತರಿಗೆ ಇದೀಗ ಗುಡ್‌ನ್ಯೂಸ್‌ ಸಿಕ್ಕಿದೆ. ಇದೀಗ ಕೇಂದ್ರ ಕೃಷಿ ಸಚಿವಾಲಯವು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಪಿಎಂ ಕಿಸಾನ್ ಸಮ್ಮಾನ್ ನಿಧಿ ಮೂಲಕ ದಿನಾಂಕವನ್ನು ಬಹಿರಂಗಪಡಿಸಿದೆ. ಮಾರ್ಚ್ 13 ರಂದು ಈ ಕಂತಿನ 2,000 ರೂ. ನೇರವಾಗಿ ರೈತರ ಖಾತೆಗೆ ಜಮಾ ಆಗಲಿದೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಟ್ವಿಟರ್‌ ಹ್ಯಾಂಎಲ್‌ನ ಪೋಸ್ಟ್‌ನಲ್ಲಿ, ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಮೂಲಕ, ಪ್ರತಿಯೊಬ್ಬ ಅರ್ಹ ರೈತನಿಗೆ ವರ್ಷಕ್ಕೆ ಆರು ಸಾವಿರ ರೂಪಾಯಿಗಳ ಆರ್ಥಿಕ ನೆರವು ದೊರೆಯುತ್ತದೆ. ಸರ್ಕಾರ ಈ ಮೊತ್ತವನ್ನು ತಲಾ ಎರಡು ಸಾವಿರ ರೂಪಾಯಿಗಳ ಮೂರು ಕಂತುಗಳಲ್ಲಿ ನೀಡುತ್ತಿದೆ. ಮಾರ್ಚ್ 13 ರಂದು ಬಿಡುಗಡೆಯಾಗುವ ಹಣವು ಡಿಬಿಟಿ ವಿಧಾನದ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಹೋಗುತ್ತದೆ. ರೈತರು ಈ ಹಣವನ್ನು ತಮ್ಮ ಕೃಷಿ ಅಗತ್ಯಗಳಿಗಾಗಿ ಬಳಸಬಹುದು ಎಂದು ಮಾಹಿತಿ ನೀಡಲಾಗಿದೆ.

ಇನ್ನು ಕೇಂದ್ರ ಸರ್ಕಾರವು ಈಗಾಗಲೇ ಎಲ್ಲಾ ರಾಜ್ಯಗಳಿಂದ ಫಲಾನುಭವಿಗಳ ಪಟ್ಟಿಯನ್ನು ಸಂಗ್ರಹಿಸಿದೆ. ಈ ಯೋಜನೆಯ ಅನುಷ್ಠಾನದ ನಂತರ, ಕೃಷಿ ವಲಯದಲ್ಲಿನ ಹೂಡಿಕೆ ತೊಂದರೆಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿವೆ. ಈ ನೆರವು ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರದಾನವಾಗಿದೆ. ಈ ಹಣವು ಬೀಜಗಳು ಮತ್ತು ರಸಗೊಬ್ಬರಗಳನ್ನು ಖರೀದಿಸಲು ತುಂಬಾ ಉಪಯುಕ್ತವಾಗಿರುತ್ತದೆ.

ಫಲಾನುಭವಿಗಳು ತಮ್ಮ ಖಾತೆಗಳಿಗೆ ಹಣ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿಯಲು ಅಧಿಕೃತ ವೆಬ್‌ಸೈಟ್‌ ನಲ್ಲಿ ಪರಿಶೀಲಿಸಬಹುದು. ಪಿಎಂ ಕಿಸಾನ್ ಪೋರ್ಟಲ್‌ಗೆ ಭೇಟಿ ನೀಡಿ ನಿಮ್ಮ ಸ್ಥಿತಿಯನ್ನು ತಿಳಿದುಕೊಳ್ಳಿ ಆಯ್ಕೆಯ ಮೂಲಕ ವಿವರ ಪಡೆಯಬಹುದು. ಎಸ್‌ಎಂಎಸ್ ಮೂಲಕವೂ ಮಾಹಿತಿಯನ್ನು ಸ್ವೀಕರಿಸಬಹುದು. ತಾಂತ್ರಿಕ ಸಮಸ್ಯೆಗಳಿದ್ದಲ್ಲಿ, ಅಧಿಕಾರಿಗಳನ್ನು ತಕ್ಷಣ ಸಂಪರ್ಕಿಸಬೇಕು.

ಈ ಕಂತಿನ ಹಣವನ್ನು ಪಡೆಯಲು ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಕೆವೈಸಿ ಪೂರ್ಣಗೊಳಿಸದವರಿಗೆ ಈ ಬಾರಿ ಹಣ ಬರುವುದಿಲ್ಲ. ರೈತರು ತಮ್ಮ ಹತ್ತಿರದ ಸಿಎಸ್‌ಸಿ ಕೇಂದ್ರಗಳಿಗೆ ಹೋಗಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಅಥವಾ ಅವರು ಪಿಎಂ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮನ್ನು ತಾವೇ ನವೀಕರಿಸಿಕೊಳ್ಳಬಹುದು.

Shwetha M