ಮತದಾನಕ್ಕೂ ಮುನ್ನ ರಾಜ್ಯಕ್ಕೆ ಮೋದಿ, ಅಮಿತ್ ಶಾ – ಮೇ 4 ರಂದು ಉಡುಪಿಗೆ ಭೇಟಿ?

ಮತದಾನಕ್ಕೂ ಮುನ್ನ ರಾಜ್ಯಕ್ಕೆ ಮೋದಿ, ಅಮಿತ್ ಶಾ – ಮೇ 4 ರಂದು ಉಡುಪಿಗೆ ಭೇಟಿ?

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಬಿಜೆಪಿ ತನ್ನ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಚುನಾವಣಾ ಹೊಸ್ತಿಲಲ್ಲಿ  ರಾಜ್ಯಕ್ಕೆ ಕೇಂದ್ರದ ಬಿಜೆಪಿ ನಾಯಕರು ಪದೇ ಪದೆ ಎಂಟ್ರಿ ಕೊಡುತ್ತಿದ್ದಾರೆ. ಇದೀಗ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಆಗಮಿಸಲಿದ್ದಾರೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯನ ವಾರ್ಷಿಕ ಆದಾಯ 123 ಕೋಟಿ ರೂ.! – ಸತತ 12 ನೇ ವರ್ಷವೂ ನಂ.1 ಪಟ್ಟ?

ಮೇ 4 ರಂದು ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಇದರಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಯೋಗಿ ಆದಿತ್ಯನಾಥ್‌ ಕೂಡ ಚುನಾವಣಾ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆ ಅಂತಾ ಕೇಂದ್ರದ ನಾಯಕರು ಜಿಲ್ಲಾ ಪ್ರಮುಖರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಕಾಂಗ್ರೆಸ್‌ ಕೂಡ ರಾಷ್ಟ್ರೀಯ ನಾಯಕರು, ಸ್ಟಾರ್‌ ಪ್ರಚಾರಕರನ್ನು ಉಡುಪಿ ಜಿಲ್ಲೆಗೆ ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ನಗರ ಅಥವಾ ಭೇಟಿಗೆ ಸೂಕ್ತವಾದ ಸ್ಥಳಗಳಲ್ಲಿ ಬೃಹತ್ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಜಿಲ್ಲಾ ಪಕ್ಷಕ್ಕೆ ವಿಷಯ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

suddiyaana