ಆದಿತ್ಯ L1 ವಿಷನ್ ಯಶಸ್ವಿ ಉಡಾವಣೆ – ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಬೆಂಗಳೂರು: ಚಂದ್ರಯಾನ – 3 ಯಶಸ್ವಿಯಾದ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಮಹತ್ತರವಾದ ಸಾಧನೆ ಮಾಡಿದೆ. ಸೂರ್ಯನ ಅಧ್ಯಯನಕ್ಕಾಗಿ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಶನಿವಾರ 11.50 ಕ್ಕೆ ಆದಿತ್ಯ L1 ವಿಷನ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇಸ್ರೋ ವಿಜ್ಞಾನಿಗಳ ಈ ಅಭೂತಪೂರ್ವ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ: ಸೂರ್ಯ ಶಿಕಾರಿಗೆ ಹೊರಟ ಇಸ್ರೋ – ಆದಿತ್ಯ L1 ನೌಕೆ ಹೊತ್ತು ಯಶಸ್ವಿಯಾಗಿ ನಭಕ್ಕೆ ಹಾರಿದ PSLV C-57 ರಾಕೆಟ್
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರಿಸಿದೆ. ಭಾರತದ ಮೊದಲ ಸೌರ ಮಿಷನ್, ಆದಿತ್ಯ ಎಲ್-1ನ ಯಶಸ್ವಿ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಬರೆದು ತಮ್ಮ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
After the success of Chandrayaan-3, India continues its space journey.
Congratulations to our scientists and engineers at @isro for the successful launch of India’s first Solar Mission, Aditya -L1.
Our tireless scientific efforts will continue in order to develop better…
— Narendra Modi (@narendramodi) September 2, 2023