8,450 ಕೋಟಿ ವೆಚ್ಚದ ಜಲವಿದ್ಯುತ್ ಯೋಜನೆ ಸಮರ್ಪಿಸಿದ ಪ್ರಧಾನಿ ಮೋದಿ

8,450 ಕೋಟಿ ವೆಚ್ಚದ ಜಲವಿದ್ಯುತ್ ಯೋಜನೆ ಸಮರ್ಪಿಸಿದ ಪ್ರಧಾನಿ ಮೋದಿ

ಇಟಾನಗರ: ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ 600 ಮೆಗಾವ್ಯಾಟ್ ಸಾಮರ್ಥ್ಯದ ಕಮೆಂಗ್ ಜಲವಿದ್ಯುತ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ದೇಶಕ್ಕೆ ಸಮರ್ಪಿಸಿದರು.

ಕಮೆಂಗ್ ಜಲವಿದ್ಯುತ್ ಯೋಜನೆಯನ್ನು ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ 80 ಚದರ ಕಿ.ಮೀ.ಗಿಂತಲೂ ಹೆಚ್ಚು ಪ್ರದೇಶದಲ್ಲಿ 8,450 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಇದನ್ನೂ ಓದಿ: ಡಿ. 7 ರಿಂದ ಸಂಸತ್ ಚಳಿಗಾಲದ ಅಧಿವೇಶನ- ಹಣದುಬ್ಬರ, ಬೆಲೆ ಏರಿಕೆ ಚರ್ಚೆ ಸಾಧ್ಯತೆ

ಈ ಯೋಜನೆಯಿಂದ ಅರುಣಾಚಲ ಪ್ರದೇಶಕ್ಕೆ ಅಗತ್ಯಕ್ಕಿಂತಲೂ ಹೆಚ್ಚು ವಿದ್ಯುತ್ ಉತ್ಪಾದನೆಯಾಗಲಿದೆ. ಸ್ಥಿರತೆ ಮತ್ತು ಏಕೀಕರಣದ ದೃಷ್ಟಿಯಿಂದ ರಾಷ್ಟ್ರೀಯ ಗ್ರಿಡ್‌ಗೆ ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಅರುಣಾಚಲದ ರಾಜಧಾನಿ ಇಟಾನಗರದ ಹೊಲೊಂಗಿನಿಯಲ್ಲಿ ಅರುಣಾಚಲದ ಮೊದಲ “ಗ್ರೀನ್‌ಫೀಲ್ಡ್” ವಿಮಾನ ನಿಲ್ದಾಣವಾದ ದೋನಿ ಪೊಲೊ ವಿಮಾನ ನಿಲ್ದಾಣಕ್ಕೆ ಮೋದಿ ಚಾಲನೆ ನೀಡಿದ್ದಾರೆ.

suddiyaana