ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ – ಫುಟ್‌ಬಾಲ್ ತಾರೆ ‘ಮೆಸ್ಸಿ’ ಜೆರ್ಸಿ ಗಿಫ್ಟ್

ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ – ಫುಟ್‌ಬಾಲ್ ತಾರೆ ‘ಮೆಸ್ಸಿ’ ಜೆರ್ಸಿ ಗಿಫ್ಟ್

ಅರ್ಜೆಂಟೀನಾ ಫುಟ್‌ಬಾಲ್‌ ತಂಡದ ಸ್ಟಾರ್ ಆಟಗಾರ ಲಿಯೊನೆಲ್‌ ಮೆಸ್ಸಿ ಹೆಸರಿನ ಜೆರ್ಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಗೊರೆಯಾಗಿ ಸಿಕ್ಕಿದೆ. ಬೆಂಗಳೂರಿನಲ್ಲಿ ನಡೆದ ಇಂಡಿಯಾ ಎನರ್ಜಿ ವೀಕ್‌ನ ಅಂಗವಾಗಿ ಅರ್ಜೆಂಟೀನಾದ ವೈಪಿಎಫ್ ಅಧ್ಯಕ್ಷ ಪಾಬ್ಲೊ ಗೊನ್ಜಾಲೆಜ್ ಅವರು, ಮೆಸ್ಸಿ ಹೆಸರನ್ನು ಒಳಗೊಂಡ ಅರ್ಜೆಂಟೀನಾ ತಂಡದ ಜೆರ್ಸಿಯನ್ನು ಪ್ರಧಾನಿ ಮೋದಿ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನೂ ಓದಿ:  ಅನ್ಯಕೋಮಿನ ಯುವಕನ ಕಗ್ಗೊಲೆ.. ಭುಗಿಲೆದ್ದ ಜ್ವಾಲೆ- ಫೇಸ್ ಬುಕ್, ವಾಟ್ಸ್ ಆ್ಯಪ್ ಸೇರಿ 23 ಆ್ಯಪ್ ಗಳಿಗೆ ನಿಷೇಧ!

ಕಳೆದ ವರ್ಷ ಡಿಸೆಂಬರ್‌ನಲ್ಲಿ ಅರ್ಜೆಂಟೀನಾ ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಫ್ರಾನ್ಸ್‌ ತಂಡದ ವಿರುದ್ಧ ಜಯಗಳಿಸಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿರುವ ಟ್ವೀಟ್ ಮೆಚ್ಚುಗೆ ಗಳಿಸಿತ್ತು. ‘ಇದು ಅತ್ಯಂತ ರೋಮಾಂಚಕ ಫುಟ್‌ಬಾಲ್ ಪಂದ್ಯಗಳಲ್ಲಿ ಒಂದಾಗಿ ನೆನಪಿನಲ್ಲಿ ಉಳಿಯುತ್ತದೆ. FIFA World Cup ಚಾಂಪಿಯನ್ ಆದ ಅರ್ಜೆಂಟೀನಾಗೆ ಅಭಿನಂದನೆಗಳು. ಟೂರ್ನಿಯಲ್ಲಿ ಅವರು ಅದ್ಭುತವಾಗಿ ಆಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ವಿಜಯದಲ್ಲಿ ಭಾಗಿಯಾಗಿದ್ದಾರೆ’ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದರು. ಈ ಮೂಲಕ ಫುಟ್‌ಬಾಲ್ ಮೇಲೆ ತನಗಿರುವ ಅಭಿಮಾನವನ್ನೂ ವ್ಯಕ್ತಪಡಿಸಿದ್ದರು.

suddiyaana