ಅತ್ಯಾಧುನಿಕ ಅಯೋಧ್ಯೆ ರೈಲು ನಿಲ್ದಾಣ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲುಗಳಿಗೂ ಚಾಲನೆ

ಅತ್ಯಾಧುನಿಕ ಅಯೋಧ್ಯೆ ರೈಲು ನಿಲ್ದಾಣ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲುಗಳಿಗೂ ಚಾಲನೆ

ಅಯೋಧ್ಯೆಯ ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಸಂಪೂರ್ಣ ಪರಿಸರ ಸ್ನೇಹಿಯಾಗಿ ಅಭಿವೃದ್ಧಿಪಡಿಸಲಾದ ರೈಲು ನಿಲ್ದಾಣದ ಉದ್ಘಾಟನೆ ಬಳಿಕ ಎರಡು ಅಮೃತ್ ಭಾರತ್ ರೈಲುಗಳು ಹಾಗೂ 6 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು.

ರೈಲು ನಿಲ್ದಾಣದ ಬಳಿಕ ಪ್ರಧಾನಿ ಮೋದಿ ರೈಲು ನಿಲ್ದಾಣವನ್ನ ಪರಿಶೀಲಿಸಿದ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಏರ್‌ಪೋರ್ಟ್ ವ್ಯವಸ್ಥೆಯ ರೈಲ್ವೇ ನಿಲ್ದಾಣದಂತಿರುವ ಅಯೋಧ್ಯಧಾಮ ಜಂಕ್ಷನ್ ಸಂಪೂರ್ಣ ಪರಿಸರ ಸ್ನೇಹಿಯಾಗಿ ನಿರ್ಮಿಸಲಾಗಿದೆ. ರಾಮ ಮಂದಿರದಿಂದ 2.1 ಕಿ.ಮೀ. ದೂರದಲ್ಲಿ ನಿರ್ಮಾಣಗೊಂಡಿದ್ದು, ಮೊದಲ ಹಂತದಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಕೆಲಸ ಕಾರ್ಯ ನಡೆದಿದೆ. 10,000 ಚದರ ಮೀಟರ್ ವಿಸ್ತೀರ್ಣ ಹೊಂದಿದೆ.

ಇದನ್ನೂ ಓದಿ: 5 ಅಸ್ಥಿಪಂಜರ ಪತ್ತೆ ಕೇಸ್‌ – ತಮ್ಮ ಮನೆಗಳಿಗೆ ಬೀಗ ಹಾಕಿ ತೆರಳಿದ ಸ್ಥಳೀಯ ನಿವಾಸಿಗಳು!

ರೈಲು ನಿಲ್ದಾಣ ಅಭಿವೃದ್ಧಿಗೆ 3 ಪ್ಲಾಟ್‌ ಫಾರಂಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಲಾಗಿದೆ. 3 ಅಂತಸ್ತಿನ ಕಟ್ಟಡ, ಲಿಫ್ಟ್, ಎಸ್ಕಲೇಟರ್, ಮಕ್ಕಳ ಆರೈಕೆ ಕೊಠಡಿ, ಫುಡ್ ಪ್ಲಾಜಾ, ಪೂಜಾ ಪರಿಕರ ಅಂಗಡಿಗಳಿವೆ. 2ನೇ ಹಂತದಲ್ಲಿ 480 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಯಲಿದೆ.

ರೈಲು ನಿಲ್ದಾಣ ಲೋಕಾರ್ಪಣೆ ಬಳಿಕ ಪ್ರಧಾನಿ ಮೋದಿ ಅವರು ಇದೇ ವೇಳೆ 2 ಅಮೃತ್‌ ಭಾರತ್‌ ರೈಲು ಹಾಗೂ 6 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೂ ಹಸಿರು ನಿಶಾನೆ ತೋರಿದರು. ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ – ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿದಂತೆ ಆರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌, ಸಚಿವ ಅಶ್ವಿನಿ ವೈಷ್ಣವ್‌ ಸೇರಿದಂತೆ ಪ್ರಮುಖ ಗಣ್ಯರು ಜೊತೆಯಲ್ಲಿದ್ದರು.

Shwetha M