ಪುರಿ ಜಗನ್ನಾಥ ದೇವಾಲಯದಲ್ಲಿ ಪ್ರಧಾನಿ ಮೋದಿ – ಪ್ರಧಾನಿಯನ್ನು ಕಾಣಲು ಹರಿದು ಬಂತು ಜನಸಾಗರ

ಪುರಿ ಜಗನ್ನಾಥ ದೇವಾಲಯದಲ್ಲಿ ಪ್ರಧಾನಿ ಮೋದಿ – ಪ್ರಧಾನಿಯನ್ನು ಕಾಣಲು ಹರಿದು ಬಂತು ಜನಸಾಗರ

ಲೋಕಸಭೆ ಚುನಾವಣೆಯ 5 ನೇ ಹಂತದ ಮತದಾನ ನಡೆಯುತ್ತಿದೆ. 49 ಕ್ಷೇತ್ರಗಳಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದರೆ, ಇತ್ತ ಮುಂದಿನ ಹಂತದ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಲ್ಲಿ ಕಣಕ್ಕಿಳಿದಿದ್ದು, ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಸೋಮವಾರ ಪ್ರಧಾನಿ ಮೋದಿ,  ಪುರಿಯಲ್ಲಿ ರೋಡ್​ ಶೋ ನಡೆಸಿದ್ದಾರೆ.

ಇದನ್ನೂ ಓದಿ:‌ ರಾಹುಲ್‌ ಗಾಂಧಿ ಪ್ರಧಾನಿಯಾಗುವವರೆಗೂ ಸಾಲ ಕೊಡುವುದಿಲ್ಲ! – ಅಂಗಡಿ ಮುಂದೆ ಬೋರ್ಡ್‌ ಹಾಕಿದ ವ್ಯಾಪಾರಿ

ಭಾನುವಾರ ರಾತ್ರಿ ಭುವನೇಶ್ವರಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಗ್ಗೆ 7 ಗಂಟೆಗೆ ಪುರಿಯ ತಲ್ಬಾನಿಯಾ ಹೆಲಿಪ್ಯಾಡ್‌ಗೆ ಬಂದರು. ಅಲ್ಲಿಂದ ನೇರವಾಗಿ ದೇವಸ್ಥಾನಕ್ಕೆ ತೆರಳಿ ಜಗನ್ನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದಾದ ಬಳಿಕ ಬೆಳಗ್ಗೆ 8 ಗಂಟೆಯ ನಂತರ ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಪ್ರಧಾನಿಯನ್ನು ನೋಡಲು ಬೆಳಗ್ಗೆಯಿಂದಲೇ ಬಡ್ಡಂಡ್‌ನ ಎರಡೂ ಬದಿಗಳಲ್ಲಿ ಅಪಾರ ಜನಸ್ತೋಮ ನೆರೆದಿತ್ತು. ಜಗನ್ನಾಥ ಧಾಮದುದ್ದಕ್ಕೂ ʼಮೋದಿ-ಮೋದಿʼ ಘೋಷಣೆ ಮೊಳಗಿದೆ. ರೋಡ್‌ ಶೋ ವೇಳೆ ಪ್ರಧಾನಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಮನಮೋಹನ್ ಸಮಾಲ್ ಮತ್ತು ಪುರಿ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಡಾ. ಸಂಬಿತ್ ಪಾತ್ರ ಸಾಥ್‌ ನೀಡಿದರು.

ಸುಮಾರು ಒಂದು ಗಂಟೆಗಳ ಕಾಲ ಪ್ರಧಾನಿಯವರ ರೋಡ್ ಶೋ ನಡೆಯಿತು. ಒಡಿಶಾದ ಸಂಸ್ಕೃತಿಯ ಝಲಕ್ ಕೂಡ ಬಡ್ಡಂಡ್‌ನ ಎರಡೂ ಬದಿಗಳಲ್ಲಿ ಕಂಡುಬಂದಿದೆ. ಒಂದೆಡೆ ಕಲಾವಿದರು ಪ್ರಧಾನಿಯವರನ್ನು ಸ್ವಾಗತಿಸಲು ಗೋಟಿ ಪುವಾ ನೃತ್ಯ ಮಾಡಿದ್ದು, ಇನೊಂದೆಡೆ ಒಡಿಸ್ಸಿ ನೃತ್ಯದ ಮೂಲಕ ಮೋದಿ ಗಮನಸೆಳೆದರು. ಇದಾದ ಬಳಿಕ ಮೋದಿ ಚುನಾವಣಾ ಪ್ರಚಾರಕ್ಕಾಗಿ ಅಂಗುಲ್‌ಗೆ ತೆರಳಿದ್ದಾರೆ.

Shwetha M